ಬೆಂಗಳೂರು: ಹೆಚ್‌ಡಿ ದೇವೇಗೌಡರು ಜ್ವರ ಹಾಗೂ ಮೂತ್ರನಾಳದ ಸಮಸ್ಯೆಯಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಮಣಿಪಾಲ್ ಆಸ್ಪತ್ರೆಯಲ್ಲಿ ದೇವೇಗೌಡರಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿತ್ತು. ಸದ್ಯ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡು ಬಂದಿದೆ. ಆದ್ದರಿಂದ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಜ್ವರ ಹಾಗೂ ಯೂರಿನ್ ಇನ್ಫೆಕ್ಷನ್ನಿಂದ ಆಸ್ಪತ್ರೆಗೆ ದಾಖಲಾಗಿದ್ದ ದೇವೇಗೌಡರ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ವೈದ್ಯರ ಸಲಹೆಯಂತೆ ಮುಂದಿನ ಕೆಲವು ದಿನಗಳು ಮನೆಯಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ.
ಚಳಿ ಜ್ವರ ಹಾಗೂ ಯೂರಿನ್ ಇನ್ಫೆಕ್ಷನ್ ಕಾರಣ ದೇವೇಗೌಡರನ್ನು ಅಕ್ಟೋಬರ್ 6 ರಂದು ರಾತ್ರಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರನಿಗಾ ಘಟಕದಲ್ಲಿ ದಾಖಲಿಸಿ ಡಾ ಸುದರ್ಶನ್ ಬಲ್ಲಾಳ್ ಅವರು ದೇವೇಗೌಡರಿಗೆ ಚಿಕಿತ್ಸೆ ನೀಡಿದ್ದಾರೆ. ದೇವೇಗೌಡರು ಶೀಘ್ರ ಗುಣಮುಖರಾಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅನೇಕ ರಾಜಕೀಯ ಗಣ್ಯರು ಶುಭ ಹಾರೈಸಿದ್ದರು.