ಬೆಂಗಳೂರು: ದೇವೇಗೌಡರ ಅಭಿಮಾನಿಗಳು ಮತ್ತು ಕಾರ್ಯಕರ್ತರು ಆತಂಕಪಡುವ ಅಗತ್ಯವಿಲ್ಲ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಚಳಿ ಜ್ವರ ಹಾಗೂ ಯೂರಿನ್ ಇನ್ಫೆಕ್ಷನ್ನಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ.
ಈ ಕುರಿತು ನಗರದಲ್ಲಿ ಮಾತನಾಡಿದ ಅವರು, ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಯಾರೂ ಆತಂಕಪಡುವ ಅಗತ್ಯತೆ ಇಲ್ಲ. ತಂದೆಯವರಿಗೆ ಆರೋಗ್ಯದ ಸಮಸ್ಯೆ ಇಲ್ಲ. ಕಳೆದ ಮೂರು ದಿನಗಳಿಂದ ವೈದ್ಯರು ಚಿಕಿತ್ಸೆ ನೀಡಿದ್ದಾರೆ.
ಚೇತರಿಸಿಕೊಂಡಿದ್ದಾರೆ. ಜನತೆಯ ಆಶೀರ್ವಾದ ಮತ್ತು ದೇವರನ್ನು ನಂಬಿರುವುದರಿಂದ ಅವರಿಗೆ ಯಾವುದೇ ರೀತಿಯ ಸಮಸ್ಯೆ ಇಲ್ಲ. ದೇವರ ಮತ್ತು ಜನತೆಯ ಆಶೀರ್ವಾದದಿಂದ ಆರೋಗ್ಯವಾಗಿದ್ದಾರೆ ಎಂದರು. ಇನ್ನೂ ಮೂರ್ನಾಲ್ಕು ದಿನದಲ್ಲಿ ತಂದೆಯವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುತ್ತಾರೆ ಎಂದು ಮಾಹಿತಿ ನೀಡಿದರು.


