HomeGadag Newsಗವಾಯಿಗಳ ಜಾತ್ರೆಯಲ್ಲಿ ಸಂಗೀತಾ ಕಟ್ಟಿ ಅವರ ಮನಮೋಹಕ ಗಾಯನಕ್ಕೆ ಮನಸೋತ ಭಕ್ತರು

ಗವಾಯಿಗಳ ಜಾತ್ರೆಯಲ್ಲಿ ಸಂಗೀತಾ ಕಟ್ಟಿ ಅವರ ಮನಮೋಹಕ ಗಾಯನಕ್ಕೆ ಮನಸೋತ ಭಕ್ತರು

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಗದಗ: ಪರಮಪೂಜ್ಯ ಗಾನಯೋಗಿ ಲಿಂ. ಪಂ. ಪಂಚಾಕ್ಷರಿ ಗವಾಯಿಗಳವರ 82ನೇ ಹಾಗೂ ಪದ್ಮಭೂಷಣ ಲಿಂ. ಡಾ. ಪಂ. ಪುಟ್ಟರಾಜ ಕವಿ ಗವಾಯಿಗಳವರ 16ನೇ ಪುಣ್ಯಸ್ಮರಣೋತ್ಸವ ಮತ್ತು ಉಭಯ ಗುರುಗಳ ಜಾತ್ರಾ ಮಹೋತ್ಸವದ ಅಂಗವಾಗಿ ನಡೆದ ಸಂಗೀತ ಕಾರ್ಯಕ್ರಮದಲ್ಲಿ ಅಂತರರಾಷ್ಟ್ರೀಯ ಖ್ಯಾತಿಯ ಗಾಯಕಿ ಸಂಗೀತಾ ಕಟ್ಟಿ ಕುಲಕರ್ಣಿ ಅವರು ಮನಮೋಹಕ ಗಾಯನದ ಮೂಲಕ ಭಕ್ತರು ಹಾಗೂ ಸಂಗೀತಾಭಿಮಾನಿಗಳನ್ನು ರಂಜಿಸಿದರು.

ಅವರ ಸುಮಧುರ ಕಂಠದಿಂದ ಮೂಡಿಬಂದ ಭಕ್ತಿಗೀತೆಗಳು ಮತ್ತು ಶಾಸ್ತ್ರೀಯ ಸಂಗೀತದ ಗಾಯನಕ್ಕೆ ಸಭಾಂಗಣದಲ್ಲಿದ್ದ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದರು. ಕಾರ್ಯಕ್ರಮವು ಜಾತ್ರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿ ಗಮನ ಸೆಳೆಯಿತು.

ಈ ಸಂದರ್ಭದಲ್ಲಿ ಪುಟ್ಟರಾಜ ಗವಾಯಿಗಳ ಮಠದ ಪರವಾಗಿ ಪುಷ್ಪಾ ಹಿಟ್ನಾಳ ಅವರು ಸಂಗೀತಾ ಕಟ್ಟಿ ಕುಲಕರ್ಣಿ ಅವರನ್ನು ಸನ್ಮಾನಿಸಿ ಗೌರವಿಸಿದರು.

ಕಾರ್ಯಕ್ರಮದಲ್ಲಿ ಗದಗ ಜಿಲ್ಲಾ ವಿಕಾಸ ವೇದಿಕೆ ಅಧ್ಯಕ್ಷ ವಿಶ್ವನಾಥ ಖಾನಾಪೂರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img