ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ಭಕ್ತಾದಿಗಳೇ ಗಮನಿಸಿ, ಇಲ್ಲೊಂದು ವಿಶೇಷ ಮನವಿ

0
Spread the love

ಮಂಗಳೂರು;- ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ಭಕ್ತಾದಿಗಳಿಗೆ ಇಲ್ಲೊಂದು ವಿಶೇಷ ಮನವಿ ಮಾಡಲಾಗಿದೆ.

Advertisement

ವಿಜಯಪುರ-ಮಂಗಳೂರು ರೈಲಿನ ವೇಳಾಪಟ್ಟಿ ಪರಿಷ್ಕರಣೆ ಮಾಡಬೇಕು ಮತ್ತು ಈ ರೈಲನ್ನು ಮಂಗಳೂರು ಸೆಂಟ್ರಲ್‌ ತನಕ ವಿಸ್ತರಣೆ ಮಾಡಬೇಕು ಎಂದು ಬೇಡಿಕೆ ಮುಂದಿಟ್ಟುಕೊಂಡು ಆನ್‌ಲೈನ್ ಸಹಿ ಅಭಿಯಾನ ನಡೆಸಲಾಗುತ್ತಿದೆ. ಇದಕ್ಕೆ ಉತ್ತಮ ಪ್ರತಿಕ್ರಿಯೆಯೂ ಸಿಕ್ಕಿದೆ.

ಆನ್‌ಲೈನ್ ಸಹಿ ಅಭಿಯಾನಕ್ಕೆ ಬೆಂಬಲ ನೀಡುವಂತೆ ಕುಕ್ಕೆ ಸುಬ್ರಮಣ್ಯ ಮತ್ತು ಧರ್ಮಸ್ಥಳಕ್ಕೆ ಆಗಮಿಸುವ ಭಕ್ತರಿಗೆ ಮನವಿ ಮಾಡಲಾಗಿದೆ.

ಈ ಕುರಿತು ಫೇಸ್‌ಬುಕ್ ಪೋಸ್ಟ್ ಹಾಕಲಾಗಿದೆ, ಸಹಿ ಮಾಡಲು ಲಿಂಕ್ ಸಹ ನೀಡಲಾಗಿದೆ.

ಫೇಸ್‌ಬುಕ್ ಪೋಸ್ಟ್‌ನಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ವಿಜಯಪುರ, ಗದಗ, ಬಾಗಲಕೋಟೆ, ಹುಬ್ಬಳ್ಳಿ, ಹಾವೇರಿ, ದಾವಣಗೆರೆ, ಚಿಕ್ಕಮಗಳೂರು, ಹಾಸನ ಸೇರಿ ನೆರೆ ಜಿಲ್ಲೆಗಳ ಭಾಗಗಳಿಂದ ರೈಲಿನಲ್ಲಿ ಬರುವ ಭಕ್ತಾದಿಗಳ ಬಳಿ ನಮ್ಮದೊಂದು ಮನವಿ ಎಂದು ತಿಳಿಸಲಾಗಿದೆ.


Spread the love

LEAVE A REPLY

Please enter your comment!
Please enter your name here