ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ತಾಲೂಕಿನ ಮುಕ್ತಿಮಂದಿರ ಧರ್ಮಕ್ಷೇತ್ರದಲ್ಲಿ ಶಿವರಾತ್ರಿ ಜಾತ್ರಾ ಮಹೋತ್ಸವದ ಅಂಗವಾಗಿ ಮಾ.10ರಂದು ಸಂಜೆ 5ಕ್ಕೆ ಬಾಳೇಹೊನ್ನೂರ ಶ್ರೀ ರಂಭಾಪುರಿ ಜಗದ್ಗುರು ಡಾ. ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರ ಸಾನಿಧ್ಯ ಮತ್ತು ಮುಕ್ತಿಮಂದಿರ ಧರ್ಮಕ್ಷೇತ್ರದ ಪಟ್ಟಾಧ್ಯಕ್ಷರಾದ ಶ್ರೀ ವಿಮಲರೇಣುಕ ವೀರಮುಕ್ತಿಮುನಿ ಶಿವಾಚಾರ್ಯ ಮಹಾಸ್ವಾಮಿಗಳ ನೇತೃತ್ವದಲ್ಲಿ ಮಹಾಶಿವರಾತ್ರಿ ಧರ್ಮಜಾಗೃತಿ ಸಮಾರಂಭ ಜರುಗಲಿದೆ.
ನೊಣವಿಕೆರೆ ಕಾಡಸಿದ್ದೇಶ್ವರ ಮಠದ ಕರಿವೃಷಭ ದೇಶಿಕೇಂದ್ರ ಶಿವಯೋಗೀಶ್ವರ ಮಹಾಸ್ವಾಮಿಗಳು ಅಧ್ಯಕ್ಷತೆ ವಹಿಸುವರು. ಬಂಕಾಪುರ ಅರಳೆಲೆ ಹಿರೇಮಠದ ರೇವಣ ಸಿದ್ದೇಶ್ವರ ಸ್ವಾಮಿಗಳು, ಎಮ್ಮಿಗನೂರಿನ ವಾಮದೇವ ಮಹಾಂತಸ್ವಾಮಿಗಳು ಉಪಸ್ಥಿತರಿರುವರು. ಕಾನೂನು ಮತ್ತು ಪ್ರವಾಸೋದ್ಯಮ ಸಚಿವ ಹೆಚ್.ಕೆ. ಪಾಟೀಲ ಕಾರ್ಯಕ್ರಮ ಉದ್ಘಾಟಿಸುವರು. ಅತಿಥಿಗಳಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ, ಶಾಸಕ ಡಾ.ಚಂದ್ರು ಲಮಾಣಿ, ಎಂ.ಆರ್. ಪಾಟೀಲ, ಎಸ್.ವಿ. ಸಂಕನೂರ, ಶ್ರೀನಿವಾಸ ಮಾನೆ, ಮಂಜುನಾಥ ಕುನ್ನೂರ, ಮಾಜಿ ಶಾಸಕರಾದ ಜಿ.ಎಸ್. ಗಡ್ಡದೇವರಮಠ, ಜಿ.ಎಂ. ಮಹಾಂತಶೆಟ್ಟರ, ರಾಮಕೃಷ್ಣ ದೊಡ್ಡಮನಿ, ರಾಮಣ್ಣ ಲಮಾಣಿ, ಎಂ.ಎಸ್. ಅಕ್ಕಿ, ಕುಸುಮಾವತಿ ಶಿವಳ್ಳಿ, ಎಸ್.ಐ. ಚಿಕ್ಕನಗೌಡ್ರ ಸೇರಿ ನಾಡಿನ ಹರಗುರುಚರಮೂರ್ತಿಗಳು, ಜನಪ್ರತಿನಿಧಿಗಳು, ಗಣ್ಯರು ಪಾಲ್ಗೊಳ್ಳುವರು. ಗುರುಸ್ವಾಮಿ ಕಲಕೇರಿಮಠ ಗವಾಯಿಗಳು ಸಂಗೀತ ಸೇವೆ ನೀಡುವರು ಎಂದು ಪ್ರಕಟಣೆ ತಿಳಿಸಿದೆ.