ಧರ್ಮದ ದಾರಿ ನೆಮ್ಮದಿಗೆ ಮೂಲ : ಶ್ರೀ ರಂಭಾಪುರಿ ಜಗದ್ಗುರುಗಳು

0
rambhapuri
Spread the love

ವಿಜಯಸಾಕ್ಷಿ ಸುದ್ದಿ, ಬಾಣಾವರ : ಮನುಷ್ಯ ಜೀವನದಲ್ಲಿ ಸುಖ, ಶಾಂತಿ ಬಯಸುವುದು ಸಹಜ. ಧರ್ಮದ ದಾರಿಯಲ್ಲಿ ನಡೆದಾಗ ಮನುಷ್ಯ ನೆಮ್ಮದಿಯ ಜೀವನ ಪಡೆಯಲು ಸಾಧ್ಯವೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.

Advertisement

ಅವರು ಬಾಣಾವರ ಪಟ್ಟಣದಲ್ಲಿ ಶ್ರೀ ಬಾಣೇಶ್ವರ ನೂತನ ದೇವಸ್ಥಾನದ ಉದ್ಘಾಟನೆ, ಪ್ರಾಣ ಪ್ರತಿಷ್ಠಾಪನೆ, ಕಳಸಾರೋಹಣದ ಅಂಗವಾಗಿ ಜರುಗಿದ ಧರ್ಮ ಜಾಗೃತಿ ಸಮಾರಂಭದಲ್ಲಿ ಆಶೀರ್ವಚನ ನೀಡುತ್ತಿದ್ದರು.

ಪ್ರಾಚೀನ ಕಾಲದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯರು ಬೋಧಿಸಿದ ತತ್ವ ಸಿದ್ಧಾಂತಗಳನ್ನು ಶರಣರು ಅಚ್ಚ ಕನ್ನಡದಲ್ಲಿ ಜನತೆಗೆ ಮುಟ್ಟಿಸುವ ಕಾರ್ಯವನ್ನು ಮಾಡಿದರು. ಶಿವಪಥವನವರಿವೊಡೆ ಗುರುಪಥ ಮೊದಲು ಎಂದಿದ್ದಾರೆ. ಜಗದ ಕತ್ತಲೆ ಕಳೆಯಲು ಸೂರ್ಯ ಬೇಕು, ಬದುಕಿನ ಕತ್ತಲೆ ದೂರ ಮಾಡಲು ಶ್ರೀ ಗುರು ಬೇಕೇ ಬೇಕು. ಬಾಣಾವರ ಪಟ್ಟಣದ ಇತಿಹಾಸ ಪ್ರಸಿದ್ಧವಾದ ಬಾಣೇಶ್ವರ ದೇವಸ್ಥಾನವನ್ನು ಭವ್ಯವಾಗಿ ಶಿಲಾಮಂಟಪದಿಂದ ನಿರ್ಮಿಸಿ ಇಂದು ಪುನರ್ ಪ್ರತಿಷ್ಠಾಪನೆ ಮಾಡಿರುವುದು ತಮಗೆ ಅತ್ಯಂತ ಸಂತೋಷವನ್ನು ತಂದಿದೆ ಎಂದ ಜಗದ್ಗುರುಗಳು ಇದಕ್ಕಾಗಿ ಶ್ರಮಿಸಿದ ಸಮಿತಿಯ ಎಲ್ಲ ಸದಸ್ಯರಿಗೆ ಮತ್ತು ಸತ್ಪಾತ್ರ ದಾನ ಮಾಡಿದ ಎಲ್ಲಾ ಭಕ್ತರಿಗೆ ಶುಭವನ್ನು ಹಾರೈಸಿದರು.

ಸಮಾರಂಭದಲ್ಲಿ ಹೂಲಿಕೆರೆ ದೊಡ್ಡಮಠದ ವಿರೂಪಾಕ್ಷಲಿಂಗ ಶಿವಾಚಾರ್ಯರು, ದೊಡ್ಡಗುಣಿ ಹಿರೇಮಠದ ರೇವಣಸಿದ್ದೇಶ್ವರ ಶಿವಾಚಾರ್ಯರು, ಕೆ.ಬಿದರೆ ದೊಡ್ಡಮಠದ ಪ್ರಭು ಕುಮಾರ ಶಿವಾಚಾರ್ಯರು ಪಾಲ್ಗೊಂಡು ಉಪದೇಶಾಮೃತ ನೀಡಿದರು.

ಸಮಾರಂಭಕ್ಕೂ ಮುನ್ನ ಮುಖ್ಯ ರಸ್ತೆಯಿಂದ ದೇವಸ್ಥಾನದವರೆಗೆ ಅಲಂಕೃತ ಸಾರೋಟ ಮೆರವಣಿಗೆ ಮೂಲಕ ಜಗದ್ಗುರುಗಳನ್ನು ಬರಮಾಡಿಕೊಂಡರು. ಉತ್ಸವದಲ್ಲಿ ಮಹಿಳೆಯರು ಆರತಿ ಹಿಡಿದ ಸುಮಂಗಲೆಯರು, ವೀರಗಾಸೆ ಅನೇಕ ವಾದ್ಯ ವೈಭವಗಳೊಂದಿಗೆ ಭವ್ಯ ಮೆರವಣಿಗೆ ಸಾಗಿತು. ಸಮಾರಂಭದ ನಂತರ ಬಂದ ಎಲ್ಲ ಭಕ್ತರಿಗೆ ಅನ್ನದಾಸೋಹ ಜರುಗಿತು.

ಮನುಷ್ಯ ಜೀವನದಲ್ಲಿ ಧರ್ಮ, ಅರ್ಥ, ಕಾಮ, ಮೋಕ್ಷ ಚತುರ್ವಿದ ಪುರುಷಾರ್ಥಗಳಲ್ಲಿ ಒಂದನ್ನಾದರೂ ಸಂಪಾದಿಸಿಕೊಳ್ಳದೆ ಹೋದರೆ ಮಾನವ ಜೀವನ ವ್ಯರ್ಥವಾಗಿ ಹೋಗುತ್ತದೆ. ಸುಖವನ್ನು ಬಯಸುವ ಮನುಷ್ಯ ಧರ್ಮ ಪರಿಪಾಲನೆ ಮಾಡಬೇಕಾಗುತ್ತದೆ. ಶ್ರೀ ಜಗದ್ಗುರು ರೇಣುಕಾಚಾರ್ಯರು ಅಹಿಂಸಾದಿ ಧ್ಯಾನ ಪರ್ಯಂತರವಾದ ದಶಧರ್ಮ ಸೂತ್ರಗಳನ್ನು ಬೋಧಿಸಿ ಸಕಲರ ಬಾಳಿಗೂ ಬೆಳಕನ್ನು ತೋರಿದ್ದಾರೆ. ಇದೇ ದಾರಿಯಲ್ಲಿ ೧೨ನೇ ಶತಮಾನದ ಶರಣರ ನಡೆದು ವೀರಶೈವ ಧರ್ಮ ಸಂಸ್ಕೃತಿಯನ್ನು ಬೆಳೆಸಿದರು ಎಂದು ರಂಭಾಪುರಿ ಜಗದ್ಗುರುಗಳು ತಿಳಿಸಿದರು.


Spread the love

LEAVE A REPLY

Please enter your comment!
Please enter your name here