HomeGadag Newsಜೂನ್ 13ರಂದು ಉಭಯ ಶ್ರೀಗಳ ಜಾತ್ರಾ ಮಹೋತ್ಸವ ಧರ್ಮಸಭೆ, ಕೀರ್ತನ ಸಮ್ಮೇಳನ

ಜೂನ್ 13ರಂದು ಉಭಯ ಶ್ರೀಗಳ ಜಾತ್ರಾ ಮಹೋತ್ಸವ ಧರ್ಮಸಭೆ, ಕೀರ್ತನ ಸಮ್ಮೇಳನ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ಪರಮಪೂಜ್ಯ ಲಿಂ. ಪಂ. ಪಂಚಾಕ್ಷರಿ ಗವಾಯಿಗಳವರ 81ನೇ ಹಾಗೂ ಪದ್ಮಭೂಷಣ ಲಿಂ.ಡಾ. ಪಂ. ಪುಟ್ಟರಾಜ ಕವಿ ಗವಾಯಿಗಳವರ 15ನೇ ಪುಣ್ಯಸ್ಮರಣೋತ್ಸವ ಹಾಗೂ ಉಭಯ ಗುರುಗಳ ಜಾತ್ರಾ ಮಹೋತ್ಸವದ ಅಂಗವಾಗಿ ಜೂನ್ 13ರಂದು ಸಂಜೆ 6 ಗಂಟೆಗೆ ವೀರೇಶ್ವರ ಪುಣ್ಯಾಶ್ರಮದಲ್ಲಿ ಧರ್ಮಸಭೆ, ಕೀರ್ತನ ಸಮ್ಮೇಳನ ಹಾಗೂ ಅಂಧರಗೋಷ್ಠಿ ಜರುಗುವುದು.

ಶಿರಹಟ್ಟಿಯ ಜ. ಫಕೀರ ದಿಂಗಾಲೇಶ್ವರ ಮಹಾಸ್ವಾಮಿಗಳು ಸಾನ್ನಿಧ್ಯ ವಹಿಸುವರು. ಅಡ್ನೂರ-ರಾಜೂರ-ಗದಗ ಬ್ರಹನ್ಮಠದ ಪೂಜ್ಯಶ್ರೀ ಅಭಿನವ ಶಿವಾನಂದ ಮಹಾಸ್ವಾಮಿಗಳು ಅಧ್ಯಕ್ಷತೆ ವಹಿಸುವರು. ಹೋತನಹಳ್ಳಿ ಸಿಂದಗಿ ಶಾಖಾಮಠದ ಪೂಜ್ಯಶ್ರೀ ಶಂಭುಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು ನೇತೃತ್ವ ವಹಿಸುವರು. ಗದುಗಿನ ನೀಲಕಂಠ ಪಟ್ಟದಾರ್ಯ ಮಹಾಸ್ವಾಮಿಗಳು, ಮುಕ್ಕಣ್ಣೇಶ್ವರ ಮಠದ ಪೂಜ್ಯಶ್ರೀ ಶಂಕರಾನಂದ ಸ್ವಾಮಿಗಳು, ಬೆಳಹೊಡದ ಪೂಜ್ಯಶ್ರೀ ಪರಿಪೂರ್ಣಾನಂದ ಭಾರತಿ ಮಹಾಸ್ವಾಮಿಗಳು, ಮುದ್ದೇಬಿಹಾಳದ ಪೂಜ್ಯಶ್ರೀ ಡಾ. ಮಲ್ಲಿಕಾರ್ಜುನ ಮಹಾಸ್ವಾಮಿಗಳು, ಅಂತೂರು-ಬೆAತೂರಿನ ಪೂಜ್ಯಶ್ರೀ ಕುಮಾರದೇವರು, ಲಿಂಗಸೂರಿನ ಪೂಜ್ಯಶ್ರೀ ಶಿವಶರಣೆ ನಂದೀಶ್ವರಿ ಅಮ್ಮನವರು ಸಮ್ಮುಖ ವಹಿಸುವರು.

ಮುಖ್ಯ ಅತಿಥಿಗಳಾಗಿ ಸಂಸದ ಬಸವರಾಜ ಬೊಮ್ಮಾಯಿ, ಮಾಜಿ ಸಚಿವ ಕಳಕಪ್ಪ ಬಂಡಿ, ಧಾರವಾಡ ಕೆಸಿಸಿ ಬ್ಯಾಂಕ್ ಅಧ್ಯಕ್ಷ ಶಿವಕುಮಾರ ಪಾಟೀಲ, ಕನಕದಾಸ ಶಿಕ್ಷಣ ಸಮಿತಿಯ ಅಧ್ಯಕ್ಷ ರವೀಂದ್ರನಾಥ್ ದಂಡಿನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಹಿರೇಮಠ, ಡಿಡಿಪಿಐ ಆರ್.ಎಸ್. ಬುರುಡಿ, ಗ್ಯಾರಂಟಿ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಬಿ.ಬಿ. ಅಸೂಟಿ, ಜಯಶ್ರೀ ಉಗಲಾಟದ, ಶಿವಲೀಲಾ ಅಕ್ಕಿ, ಡಾ. ರಾಜೇಂದ್ರ ಬಸರಿಗಿಡದ, ನಗರಸಭೆ ಸದಸ್ಯರಾದ ಅನಿತಾ ಅಸೂಟಿ, ಜಿ.ಪಂ ಮಾಜಿ ಸದಸ್ಯ ಶಿವಪ್ರಕಾಶ ಮಹಾಜನಶೆಟ್ರು, ಪ್ರಭು ದಂಡಾತಿಮಠ, ಆನಂದಯ್ಯ ವಿರಕ್ತಮಠ, ಪಂಕಜ ಬಾಪಣಾ, ಶಿವರುದ್ರಪ್ಪ ಇಟಗಿ, ಬಲರಾಮ ಬಸವಾ, ಡಾ. ಆನಂದ ಪಾಂಡುರAಗಿ, ಬಸವರಾಜ ಬಿಂಗಿ, ಎಸ್.ಎಂ. ಗೌಡರ, ಸಾದಿಕ್ ನರಗುಂದ, ವಿಕ್ರಂ ಜೈನ, ಅಯ್ಯಪ್ಪ ನಾಯ್ಕರ, ಮಲ್ಕಾಪುರದ ಗುಂಡಪ್ಪ ಕಬ್ಬಿಣದ ಭಾಗವಹಿಸುವರು. ಪೂಜ್ಯಶ್ರೀ ಡಾ. ಕಲ್ಲಯ್ಯಜ್ಜನವರು ಅಭಾರ ಮನ್ನಣೆ ಮಾಡುವರು.

ಇದೇ ಸಂದರ್ಭದಲ್ಲಿ ನಾಗನೂರಿನ ದಾಲಾಸಾಬ (ಪಾಪಾ), ಬೆಳವಣಿಕೆಯ ಮುತ್ತಪ್ಪ ಶೆಗಣ, ನಾಗರಾಜ ನಾಗನೂರ, ಪ್ರಾಚಾರ್ಯ ಶಶಿಧರ ನರಗುಂದ, ಶರಣಪ್ಪ ಕುಸುಗಲ್, ಯೋಗೇಶ ಗಡಗಿ, ನಾಗರಾಜ ಪಾಟೀಲ, ಆನಂದ ತಮನಾಳ, ಗದುಗಿನ ಆಂಜನೇಯ ಬಳ್ಳಾರಿ, ನರಗುಂದದ ಉಮೇಶಗೌಡ್ರ ಪಾಟೀಲ, ವೀರೇಶ ಹೆಬಸೂರ, ದಾನೇಶ ಗುಜಮಾಗಡಿ ಅವರನ್ನು ಸನ್ಮಾನಿಸಲಾಗುವುದು.

ರಾತ್ರಿ 10.30 ಗಂಟೆಗೆ ಶ್ರೀ ಕುಮಾರೇಶ್ವರ ಕೃಪಾಪೋಷಿತ ಪಂ. ಪಂಚಾಕ್ಷರ ಗವಾಯಿಗಳವರ ನಾಟ್ಯ ಸಂಘದಿಂದ `ಬಂದರ ನೋಡ ಬಂಗಾರಿ’ ನಾಟಕ ಪ್ರದರ್ಶನಗೊಳ್ಳಲಿದೆ. ಈ ಕಾರ್ಯಕ್ರಮದಲ್ಲಿ ಅಡ್ನೂರ-ರಾಜೂರ-ಗದಗ ಬ್ರಹನ್ಮಠದ ಪೂಜ್ಯಶ್ರೀ ಅಭಿನವ ಪಂಚಾಕ್ಷರ ಶಿವಾಚಾರ್ಯ ಮಹಾಸ್ವಾಮಿಗಳು ಸಾನ್ನಿಧ್ಯ ವಹಿಸುವರು. ಪೂಜ್ಯಶ್ರೀ ಕಲ್ಲಯ್ಯಜ್ಜನವರು ಅಧ್ಯಕ್ಷತೆ ವಹಿಸುವರು. ವೀರೇಶ್ವರ ಪುಣ್ಯಾಶ್ರಮ ಸೋಲ್ ಟ್ರಸ್ಟ್ನ ಸದಸ್ಯ ವಸಂತಗೌಡ ಪೊಲೀಸ್‌ಪಾಟೀಲ ಕಾರ್ಯಕ್ರಮ ಉದ್ಘಾಟಿಸುವವರು. ಮುಖ್ಯ ಅತಿಥಿಗಳಾಗಿ ವೀರೇಶ್ವರ ಪುಣ್ಯಾಶ್ರಮ ಸೋಲ್‌ನ ಉಪಾಧ್ಯಕ್ಷ ಪ್ರಕಾಶ ಬಸರಿಗಿಡದ ಉಪಸ್ಥಿತರಿರುವರು ಎಂದು ಶ್ರೀಮಠದ ಪ್ರಕಟಣೆ ತಿಳಿಸಿದೆ.

ಬೆಳಿಗ್ಗೆ 11 ಗಂಟೆಗೆ ಜರುಗುವ ಸನ್ಮಾನ ಕಾರ್ಯಕ್ರಮದಲ್ಲಿ ಕಪೋತಗಿರಿಯ ನಂದಿವೇರಿ ಸಂಸ್ಥಾನ ಮಠದ ಪೂಜ್ಯಶ್ರೀ ಶಿವಕುಮಾರ ಮಹಾಸ್ವಾಮಿಗಳು ದಿವ್ಯ ಸಾನ್ನಿಧ್ಯ ವಹಿಸುವರು. ಅಡ್ನೂರ-ರಾಜೂರ-ಗದಗ ಬ್ರಹನ್ಮಠದ ಪೂಜ್ಯಶ್ರೀ ಅಭಿನವ ಪಂಚಾಕ್ಷರ ಶಿವಾಚಾರ್ಯ ಮಹಾಸ್ವಾಮಿಗಳು ಅಧ್ಯಕ್ಷತೆ ವಹಿಸುವರು. ವೀರೇಶ್ವರ ಪುಣ್ಯಾಶ್ರಮದ ಪೂಜ್ಯಶ್ರೀ ಡಾ. ಕಲ್ಲಯ್ಯಜ್ಜನವರು ಸಮ್ಮುಖ ವಹಿಸುವರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!