ಜೂ. 22ರಂದು ಧರ್ಮಸಭೆ, ಕೀರ್ತನ ಸಮ್ಮೇಳನ

0
Dharmasabha and Kirtan Conference
Spread the love

ವಿಜಯಸಾಕ್ಷಿ ಸುದ್ದಿ, ಗದಗ : ಪರಮಪೂಜ್ಯ ಗಾನಯೋಗಿ ಶಿವಯೋಗಿ ಲಿಂ. ಪಂಚಾಕ್ಷರ ಗವಾಯಿಗಳವರ 80ನೇ ಪುಣ್ಯ ಸ್ಮರಣೋತ್ಸವ ಹಾಗೂ ಪದ್ಮಭೂಷಣ ಲಿಂ.ಡಾ. ಪಂ. ಪುಟ್ಟರಾಜ ಕವಿ ಗವಾಯಿಗಳವರ 14ನೇ ಪುಣ್ಯಸ್ಮರಣೋತ್ಸವ, ಉಭಯ ಗುರುಗಳ ಜಾತ್ರಾ ಮಹೋತ್ಸವ ಅಂಗವಾಗಿ ಜೂನ್ 22ರಂದು ಸಂಜೆ 6 ಗಂಟೆಗೆ ಧರ್ಮಸಭೆ ಹಾಗೂ ಕೀರ್ತನ ಸಮ್ಮೇಳನ ಜರುಗುವುದು. ಕಾರ್ಯಕ್ರಮದ ಸಾನ್ನಿಧ್ಯವನ್ನು ಕಾಶಿ ಪೀಠದ ಪೂಜ್ಯಶ್ರೀ ಡಾ. ಚಂದ್ರಶೇಖರ ಶಿವಾಚಾರ್ಯ ಭಗವತ್ಪಾದರು ವಹಿಸುವರು.

Advertisement

ಅಧ್ಯಕ್ಷತೆಯನ್ನು ಸೂಡಿ ಜುಕ್ತಿ ಹಿರೇಮಠದ ಪೂಜ್ಯಶ್ರೀ ಕೊಟ್ಟೂರು ಬಸವೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ವಹಿಸುವರು. ಚಳಗೇರಿ ಹಿರೇಮಠದ ಪೂಜ್ಯಶ್ರೀ ವೀರಸಂಗಮೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ನೇತೃತ್ವ ವಹಿಸುವರು. ಅಡ್ನೂರ ಬೃಹನ್ಮಠದ ಪೂಜ್ಯಶ್ರೀ ಅಭಿನವ ಪಂಚಾಕ್ಷರ ಶಿವಾಚಾರ್ಯ ಮಹಾಸ್ವಾಮಿಗಳು, ಬಿಕನಳ್ಳಿ-ಮೈನಳ್ಳಿ ಹಿರೇಮಠದ ಪೂಜ್ಯಶ್ರೀ ಸಿದ್ಧೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು, ಬೈಲಹೊಂಗಲದ ಡಾ. ಮಹಾಂತಯ್ಯ ಸ್ವಾಮಿಗಳು ಆರಾದ್ರಿಮಠ, ಗದಗಿನ ಅಡವಿಂದ್ರಸ್ವಾಮಿ ಮಠದ ಧರ್ಮದರ್ಶಿಗಳಾದ ಪೂಜ್ಯಶ್ರೀ ಮಹೇಶ್ವರಸ್ವಾಮೀಜಿ ಹೊಸಳ್ಳಿಮಠ ಸಮ್ಮುಖ ವಹಿಸುವರು.

ಮುಖ್ಯ ಅತಿಥಿಗಳಾಗಿ ಸಂಸದ ಪ್ರಲ್ಹಾದ ಜೋಶಿ, ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ, ಮಾಜಿ ಶಾಸಕ ಜಿ.ಎಸ್. ಗಡ್ಡದೇವರಮಠ, ಮಾಜಿ ಶಾಸಕ ಎಂ.ಕೆ. ಪಟ್ಟಣಶೆಟ್ಟಿ, ಕರ್ನಾಟಕ ಸರ್ಕಾರಿ ನೌಕರ ಸಂಘದ ಉಪಾಧ್ಯಕ್ಷ ರವಿ ಗುಂಜಿಕರ್, ವೀರೇಶ್ವರ ಪುಣ್ಯಾಶ್ರಮ ಸೋಲ್ ಟ್ರಸ್ಟ್ನ ಅಧ್ಯಕ್ಷ ನಿಂಗಪ್ಪ ಕೆಂಗಾರ, ಕರ್ನಾಟಕ ಸರ್ಕಾರಿ ನೌಕರ ಸಂಘದ ಜಿಲ್ಲಾ ಗೌರವಾಧ್ಯಕ್ಷ ಬಸವರಾಜ ಬಳ್ಳಾರಿ, ಜಿಮ್ಸ್ನ ಜಿಲ್ಲಾ ಶಸ್ತçಚಿಕಿತ್ಸಕ ಡಾ. ಬಿ.ಎಸ್. ಕರೇಗೌಡ್ರ, ಐಎಂಎ ಅಧ್ಯಕ್ಷ ಡಾ. ಜಿ.ಎಸ್. ಪಲ್ಲೇದ, ಡಾ. ವಿ.ಎಂ. ಮಲಗೌಡ್ರ, ವೀರೇಶ್ವರ ಪುಣ್ಯಾಶ್ರಮ ಸೋಲ್ ಟ್ರಸ್ಟ್ನ ಸದಸ್ಯರಾದ ವಸಂತಗೌಡ್ರ ಪೊಲೀಸ್‌ಪಾಟೀಲ, ಪಿ.ಸಿ. ಹಿರೇಮಠ, ಎಂ.ಆರ್. ಹಿರೇಮಠ, ಗಣ್ಯರಾದ ಸದಾಶಿವ ಮದರಿಮಠ, ಲಿಂಗರಾಜ ಗುಡಿಮನಿ, ರಾಜು ಕುರುಡಗಿ, ಅನಿಲ್ ಅಬ್ಬಿಗೇರಿ, ಪ್ರಶಾಂತ ಶಾಬಾದಿಮಠ, ಮಹೇಶ ಶಾಬಾದಿಮಠ, ವಿಜಯಕುಮಾರ ಹಿರೇಮಠ, ಬಾಗಲಕೋಟಿಯ ರಾಜಣ್ಣ ಹಂಗರಗಿ, ವಿ.ಎಸ್. ಮಾಳೆಕೊಪ್ಪಮಠ, ಡಾ. ಪುನೀತಕುಮಾರ ಬೆನಕನವರ, ಅಂಬರೀಶ ಹಿರೇಮಠ, ಜಿ.ಬಿ. ನೀಲರೆಡ್ಡಿ, ಎಂ.ಎಂ. ಕುಕನೂರ, ವಸಂತ ಮೇಟಿ ಅವರು ಉಪಸ್ಥಿತರಿರುವರು.

ಬೆಳಿಗ್ಗೆ 11 ಗಂಟೆಗೆ ಪೂಜ್ಯರಿಂದ ಶ್ರೀಗುರು ರಕ್ಷೆ ನೀಡಲಾಗುದು. ದಿವ್ಯ ಸಾನಿಧ್ಯವನ್ನು ಅಡ್ನೂರ ದಾಸೋಹಮಠದ ಅಭಿನವ ಪಂಚಾಕ್ಷರ ಶಿವಾಚಾರ್ಯ ಮಹಾಸ್ವಾಮಿಗಳು ವಹಿಸುವರು. ವೀರೇಶ್ವರ ಪುಣ್ಯಾಶ್ರಮದ ಪೀಠಾಧಿಪತಿ ಪೂಜ್ಯಶ್ರೀ ಕಲ್ಯಯ್ಯಜ್ಜನವರು ಅಧ್ಯಕ್ಷತೆ ವಹಿಸುವರು. ಅರಳಿಕಟ್ಟಿಯ ಗಂಗಾಧರಯ್ಯನವರು, ಧಾರವಾಡದ ಈರಪ್ಪ ಅಕ್ಕಿ, ಬೆಳವಣಿಕೆಯ ಚಂದ್ರಶೇಖರ ಶಿವಸಿಂಪಗೇರ, ನಿವೃತ್ತ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರಾದ ರುದ್ರಗೌಡ ರಬ್ಬನಗೌಡ್ರ ಉಪಸ್ಥಿತರಿರುವರು.


Spread the love

LEAVE A REPLY

Please enter your comment!
Please enter your name here