ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವ ಹೂತಿದ್ದಾಗಿ ತಪ್ಪೊಪ್ಪಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ದಳ (ಎಸ್ಐಟಿ) ತನಿಖೆಯನ್ನು ತೀವ್ರಗೊಳಿಸಿದ್ದು, ನೇತ್ರಾವತಿ ಸ್ನಾನಘಟ್ಟದ ಬಳಿಯ ಅರಣ್ಯದಲ್ಲಿ ಉತ್ಖನನ ಕಾರ್ಯ ಮುಂದುವರಿಸಿದ್ದಾರೆ.
ಇನ್ನೂ ಉತ್ಕನನದ ವೇಳೆ ಎರಡು ಪ್ಯಾನ್ ಕಾರ್ಡ್ ಮತ್ತು ಹರಿದ ರವಿಕೆ ಪತ್ತೆಯಾಗಿವೆ. ಸ್ಥಳದಲ್ಲಿ ಒಂದು ಪಾನ್ ಕಾರ್ಡ್ ಮತ್ತೊಂದು ಡೆಬಿಡ್ ಕಾರ್ಡ್ ಪತ್ತೆಯಾಗಿದೆ. ಸ್ಥಳ ಅಗೆಯುವ ಸಂದರ್ಭ ದೊರೆತ ಎರಡು ಐಡಿ ಕಾರ್ಡ್ ಸಿಕ್ಕಿದೆ ಎಂದು ದೂರುದಾರನ ಪರ ವಕೀಲ ಮಂಜುನಾಥ್ ಎನ್ ಹೇಳಿದ್ದಾರೆ.
ಈ ಸಂಬಂಧ ಮಾಧ್ಯಮಗಳಿಗೆ ಎಸ್ಐಟಿ ಮೂಲಗಳನ್ನು ಆಧಾರಿಸಿ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಸೈಟ್ ಸಂಖ್ಯೆ 1 ರಲ್ಲಿ ಸುಮಾರು 2.5 ಅಡಿ ಆಳದಲ್ಲಿ ಹರಿದ ಕೆಂಪು ರವಿಕೆ, ಪ್ಯಾನ್ ಕಾರ್ಡ್ ಮತ್ತು ಎಟಿಎಂ ಕಾರ್ಡ್ ಪತ್ತೆಯಾಗಿದೆ.
ಒಂದು ಕಾರ್ಡ್ನಲ್ಲಿ ಪುರುಷನ ಹೆಸರು ಇದ್ದರೆ ಇನ್ನೊಂದು ಕಾರ್ಡ್ನಲ್ಲಿ ಲಕ್ಷ್ಮಿ ಎಂಬ ಮಹಿಳೆಯ ಹೆಸರು ಇದೆ. ಸಾಕ್ಷ್ಯಗಳು ಸಿಕ್ಕಿದ ಕಾರಣ ನಮಗೆ ಹೊಸ ಭರವಸೆ ಮೂಡಿದೆ. ನಾವು ಎಸ್ಐಟಿ ಅವರ ಕೆಲಸದಲ್ಲಿ ಸಂಪೂರ್ಣ ನಂಬಿಕೆ ಇಟ್ಟಿದ್ದೇವೆ. ವಿಶೇಷ ತನಿಖಾ ತಂಡ ಶ್ಲಾಘನೀಯ ಕೆಲಸ ಮಾಡುತ್ತಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.