ಧರ್ಮಸ್ಥಳ ಪ್ರಕರಣ| ಇದರಲ್ಲಿ ರಾಜಕೀಯ ಮಾಡುವುದು‌ ಸರಿಯಲ್ಲ – ಲಕ್ಷ್ಮಿ ಹೆಬ್ಬಾಳ್ಕರ್‌

0
Spread the love

ಬೆಂಗಳೂರು:- ಧರ್ಮಸ್ಥಳ ಪ್ರಕರಣದಲ್ಲಿ ರಾಜಕೀಯ ಮಾಡುವುದು‌ ಸರಿಯಲ್ಲ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಹೇಳಿದ್ದಾರೆ.

Advertisement

ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಎಸ್‌ಐಟಿ ತನಿಖೆಯಿಂದ ಧರ್ಮಸ್ಥಳ ಪ್ರಕರಣದ ಸತ್ಯಾಸತ್ಯತೆ ಹೊರಬರಲಿದೆ. ಧರ್ಮಸ್ಥಳ ವಿಚಾರದಲ್ಲಿ ರಾಜಕೀಯ ಮಾಡುವುದು‌ ಸಲ್ಲ. ತನಿಖೆಯಿಂದಷ್ಟೇ ಸತ್ಯಾಸತ್ಯತೆ ಹೊರ ಬರಬೇಕಿದೆ ಎಂದರು. ಧರ್ಮಸ್ಥಳ ವಿಚಾರದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಹೇಳಿಕೆಯನ್ನು ಗಮನಿಸಿದ್ದೇನೆ.

ನಾವೆಲ್ಲರೂ ಧರ್ಮಸ್ಥಳ ಮಂಜುನಾಥನ ಭಕ್ತರು, ಈ ವಿಚಾರವಾಗಿ ಡಿಸಿಎಂ ಅವರ ಹೇಳಿಕೆಗೆ ನನ್ನ ಸಹಮತವಿದೆ. ಎಸ್‌ಐಟಿ ತನಿಖೆ ಬಗ್ಗೆ ಅಧಿಕಾರಿಗಳು ಗೃಹ ಸಚಿವರಿಗೆ ಮಾಹಿತಿ ನೀಡುತ್ತಿದ್ದಾರೆ ಎಂದು ತಿಳಿಸಿದರು. ಸಾಮಾಜಿಕ ಜಾಲತಾಣದಲ್ಲಿ ಕ್ಷೇತ್ರ ಮತ್ತು ಧರ್ಮಾಧಿಕಾರಿಗಳ ವಿರುದ್ಧ ಅವಹೇಳನ ಮಾಡಲಾಗುತ್ತಿದೆ. ಸೌಜನ್ಯಳಿಗೆ ಅನ್ಯಾಯ ಆಗಿದ್ದರೆ, ನ್ಯಾಯ ಸಿಗಬೇಕು. ಆದ್ರೆ ಮುಸುಕುದಾರಿ ಬೇರೆ ಬೇರೆ ಸ್ಥಳವನ್ನ ಗುರುತು ಮಾಡುತ್ತಿದ್ದಾನೆ. ಇದಕ್ಕೆಲ್ಲಾ ಉತ್ತರ ಸಿಗಬೇಕು ಎಂದೇ ಎಸ್‌ಐಟಿ ರಚನೆಯಾಗಿದೆ. ಆದಷ್ಟು ಬೇಗ ಉತ್ತರ ಸಿಗಲಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಹೇಳಿದರು.


Spread the love

LEAVE A REPLY

Please enter your comment!
Please enter your name here