ಶಿವಮೊಗ್ಗ: ಧರ್ಮಸ್ಥಳ ಬುರುಡೆ ಪ್ರಕರಣದ ಮಾಸ್ಕ್‌ಮ್ಯಾನ್ ಚಿನ್ನಯ್ಯನಿಗೆ ಜಾಮೀನು ಮಂಜೂರಾದರೂ, ಬಿಡುಗಡೆಯ ಭಾಗ್ಯ ಇನ್ನೂ ಸಿಕ್ಕಿಲ್ಲ. ಮಂಗಳೂರಿನ ಜಿಲ್ಲಾ ನ್ಯಾಯಾಲಯ ಜಾಮೀನು ನೀಡಿ 9 ದಿನಗಳಾದರೂ ಶ್ಯೂರಿಟಿ ಪೂರೈಸಲು ಯಾರೂ ಮುಂದೆ ಬಾರದ ಕಾರಣ, ಚಿನ್ನಯ್ಯ ಶಿವಮೊಗ್ಗ ಜಿಲ್ಲಾ ಕಾರಾಗೃಹದಲ್ಲೇ ಬಂಧಿತನಾಗಿದ್ದಾನೆ.
ಕೋರ್ಟ್ 1 ಲಕ್ಷ ರೂ. ಬಾಂಡ್ ಮತ್ತು ಇಬ್ಬರ ಶ್ಯೂರಿಟಿಯೊಂದಿಗೆ 12 ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಿತ್ತು. ಜಾಮೀನು ಸಿಕ್ಕಿದರೂ ಶ್ಯೂರಿಟಿ ನೀಡುವವರ ಕೊರತೆಯಿಂದ ಚಿನ್ನಯ್ಯ ಬಿಡುಗಡೆ ಹೊಂದಿಲ್ಲ.
ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿದ್ದೇನೆ ಎಂದು ಆರೋಪಿಸಿದ್ದ ಚಿನ್ನಯ್ಯ ಹೇಳಿದ ಸ್ಥಳಗಳಲ್ಲೆಲ್ಲಾ ಅಗೆದು ಪರೀಕ್ಷಿಸಲಾಗಿತ್ತು. ಆದರೆ ಯಾವುದೇ ಮಹತ್ವದ ಸುಳಿವು ಅಥವಾ ಆರೋಪಕ್ಕೆ ಪೂರಕವಾದ ಅಂಶಗಳು ಪತ್ತೆಯಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಆತನೇ ಪ್ರಕರಣದಲ್ಲಿ ಆರೋಪಿಯಾಗಿದ್ದ.



