ಮಂಗಳೂರು: ನೂರಾರು ಶವಗಳನ್ನು ಹೂತು ಹಾಕಿರುವ ಆರೋಪ ಸಂಬಂಧ, ‘ಮಾಸ್ಕ್ ಮ್ಯಾನ್’ ಚಿನ್ನಯ್ಯ ಮತ್ತು ಕೆಲವು ಅರ್ಜಿದಾರರು ಸುಪ್ರೀಂ ಕೋರ್ಟ್‌ನಲ್ಲಿ ತಮ್ಮ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಸಿದ್ದರು. ಆದರೆ, ಸುಪ್ರೀಂ ಕೋರ್ಟ್ ಈ ಅರ್ಜಿಯನ್ನು ವಜಾಗೊಳಿಸಿ, ಇದು ವೈಯಕ್ತಿಕ ಹಿತಾಸಕ್ತಿ ಅರ್ಜಿ ಮತ್ತು ಹಣ ವಸೂಲಿಗೆ ಸಲ್ಲಿಸಿದ ಅರ್ಜಿಯಾಗಿದೆ ಎಂದು ತೀರ್ಪು ನೀಡಿತ್ತು.
ಆದರೆ, ಸುಪ್ರೀಂ ಕೋರ್ಟಿನ ಆದೇಶವನ್ನು ಮರೆಮಾಚಿ, ಆದೇಶದ ಹಿನ್ನೆಲೆಯಲ್ಲಿ ಇದೇ ಪ್ರಕರಣದ ಮರುತನಿಖೆಗಾಗಿ ರಾಜ್ಯ ಸರ್ಕಾರದಿಂದ ವಿಶೇಷ ತನಿಖಾ ತಂಡ (SIT) ರಚನೆಗೆ ಒತ್ತಾಯ ಮಾಡಿದ್ದಾರೆ ಎಂದು ಗಂಭೀರ ಆರೋಪಗಳು ಬಂದಿವೆ. ದಕ್ಷಿಣ ಕನ್ನಡ ಎಸ್ಪಿಗೆ ದೂರು ನೀಡುವುದಕ್ಕೆ ಮುನ್ನವೇ ಚಿನ್ನಯ್ಯನ ಮೂಲಕ ಬುರುಡೆ ಗ್ಯಾಂಗ್ ಸುಪ್ರೀಂ ಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು.
ಆದ್ರೆ ಮೇ 5ರಂದು ನ್ಯಾಯಮೂರ್ತಿಗಳಾದ ಬಿ.ವಿ ನಾಗರತ್ನ, ನ್ಯಾ.ಸತೀಶ್ ಚಂದ್ರ ನೇತೃತ್ವದ ಪೀಠ ಅರ್ಜಿ ವಜಾ ಮಾಡಿತ್ತು. ಆದ್ರೂ ಇದನ್ನ ಮುಚ್ಚಿಟ್ಟು ಬುರುಡೆ ಗ್ಯಾಂಗ್ ಬೆಳ್ತಂಗಡಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿ, ಎಸ್ಪಿಗೂ ದೂರು ನೀಡಲಾಗಿತ್ತು.ಕಳೆದ ಏಪ್ರಿಲ್ 30 ರಂದು ಧರ್ಮಸ್ಥಳ ಪ್ರಕರಣದ ಕುರಿತು ಎಸ್‌ಐಟಿ ರಚನೆ ಮಾಡುವಂತೆ ಒತ್ತಾಯಿಸಿ ಬುರುಡೆ ಗ್ಯಾಂಗ್ ಅರ್ಜಿ ಸಲ್ಲಿಕೆ ಮಾಡಿತ್ತು. ಆದ್ರೆ ಮೇ 5ರಂದೇ ಸುಪ್ರೀಂ ಕೋರ್ಟ್ ಬುರುಡೆ ಗ್ಯಾಂಗ್‌ಗೆ ಛೀಮಾರಿ ಹಾಕಿ ಅರ್ಜಿ ವಜಾಗೊಳಿಸಿತ್ತು.
ಇದರಲ್ಲಿ ಯಾವುದೇ ಸಾರ್ವಜನಿಕ ಹಿತಾಸಕ್ತಿ ಕಾಣುತ್ತಿಲ್ಲ, ವೈಯಕ್ತಿಕ ಹಿತಾಸಕ್ತಿ ಕಾಣಿಸುತ್ತಿದೆ. ಇದು ಪೈಸಾ ಇಂಟರೆಸ್ಟ್ ಲಿಟಿಗೇಷನ್, ಪೊಲಿಟಿಕಲ್ ಇಂಟರೆಸ್ಟ್ ಲಿಟಿಗೇಷನ್, ಪ್ರೈವೇಟ್ ಇಂಟರೆಸ್ಟ್ ಲಿಟಿಗೇಷನ್ ಎಂದು ಬುರುಡೆ ಗ್ಯಾಂಗ್‌ಗೆ ತಪರಾಕಿ ಹಾಕಿತ್ತು. ನಾಚಿಕೆ ಮಾನಾ ಮರ್ಯಾದೆ ಎಲ್ಲವನ್ನೂ ಬಿಟ್ಟು ಬಂದು ದೂರು ನೀಡಿದ್ದೀರಿ ಎಂದು ಗ್ಯಾಂಗನ್ನ ತೀವ್ರ ತರಾಟೆಗೆ ತೆಗೆದುಕೊಂಡಿದ್ದಲ್ಲದೇ ಸಾರಾಸಗಟಾಗಿ ಅರ್ಜಿಯನ್ನ ತಿರಸ್ಕರಿಸಿತ್ತು. ಇದೆಲ್ಲವನ್ನೂ ಮುಚ್ಚಿಟ್ಟಿದ್ದ ಬೆಳ್ತಂಗಡಿ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿತ್ತು. ಬಳಿಕ ಎಸ್ಪಿಗೆ ದೂರು ನೀಡಿ ಪ್ರಕರಣ ಮುನ್ನೆಲೆಗೆ ತಂದಿದೆ ಅನ್ನೋದು ಈಗ ಬಯಲಾಗಿದೆ.



