ಬೆಂಗಳೂರು: ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡಿದ ಆರೋಪದ ಬೆನ್ನಲ್ಲೇ ಯೂಟ್ಯೂಬರ್ ಸಮೀರ್ ಎಂ.ಡಿಯನ್ನು ಪೊಲೀಸರು ಬಂಧಿಸುವ ಸಾಧ್ಯತೆ ಇದೆ. ಈಗಾಗಲೇ ಪೊಲೀಸರು ಸಮೀರ್ ಮನೆಯನ್ನ ಸುತ್ತುವರೆದಿದ್ದಾರೆ.
ಧರ್ಮಸ್ಥಳ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಆನಂದ್ ಎನ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ. ಆದರೆ, ಪೊಲೀಸರ ಆಗಮನದ ಸುಳಿವು ಸಿಗುತ್ತಿದ್ದಂತೆಯೇ ಆತ ಪರಾರಿಯಾಗಿದ್ದಾನೆ. ಸಮೀರ್‌ನನ್ನು ವಶಕ್ಕೆ ಪಡೆದು ಬೆಳ್ತಂಗಡಿಗೆ ವಿಚಾರಣೆಗೆ ಕರೆತರಲು ಪೊಲೀಸರು ನಿರ್ಧರಿಸಿದ್ದರು. ಆದರೆ ಪೊಲೀಸರ ಆಗಮನದ ಸುಳಿವು ಸಿಗುತ್ತಿದ್ದಂತೆಯೇ ಆತ ಪರಾರಿಯಾಗಿದ್ದಾನೆ.
ಆತ ಮನೆಯಲ್ಲಿ ಇಲ್ಲ ಎಂದು ಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಧರ್ಮಸ್ಥಳ ಕ್ಷೇತ್ರಕ್ಕೆ ಅಪಪ್ರಚಾರ ನಡೆಸಿದ್ದಕ್ಕೆ ರಾಜ್ಯದ್ಯಂತ ಆತನ ವಿರುದ್ಧ ಹಿಂದೂ ಸಂಘಟನೆಗಳು ದೂರು ನೀಡಿದ್ದು ಪ್ರಕರಣ ದಾಖಲಾಗಿತ್ತು. ಅಷ್ಟೇ ಅಲ್ಲದೇ ಸಾಮಾಜಿಕ ಜಾಲತಾಣದಲ್ಲಿ ಸಮೀರ್ ಅನ್ನು ಬಂಧನ ಮಾಡುವಂತೆ ನೆಟ್ಟಿಗರು ಆಗ್ರಹಿಸುತ್ತಿದ್ದರು.