ಮಂಗಳೂರು: ಧರ್ಮಸ್ಥಳ ಬುರುಡೆ ರಹಸ್ಯ ಭೇದಿಸುವ ಕಾರ್ಯಾಚರಣೆ ದಿನೇ ದಿನೇ ಭಾರೀ ಕುತೂಹಲ ಕೆರಳಿಸುತ್ತಿದೆ. ಇದೀಗ ಧರ್ಮಸ್ಥಳದ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಇಂದು 6ನೇ ಗುಂಡಿ ಉತ್ಖನನ ವೇಳೆ ಅಸ್ಥಿಪಂಜರದ ಅವಷೇಶಗಳು ಪತ್ತೆಯಾಗಿದೆ.
Advertisement
ಶೋಧದ ವೇಳೆ ಪತ್ತೆಯಾದ ಮೂಳೆಗಳನ್ನು ಎಸ್‌ಐಟಿ ಸಂಗ್ರಹ ಮಾಡಿದೆ ಎಂದು ವರದಿ ತಿಳಿಸಿದೆ. ದೂರುದಾರ ಗುರುತಿಸಿದ ಸ್ಥಳಗಳ ಪೈಕಿ ಇದೀಗ 6ನೇ ಪಾಯಿಂಟ್‌ನಲ್ಲಿ 15 ಕಾರ್ಮಿಕರಿಂದ ಉತ್ಖನನ ನಡೆಯುತ್ತಿದ್ದು,
ಎರಡು ಅಸ್ಥಿಪಂಜರ ಪತ್ತೆಯಾಗಿದೆ. ದೇಹದ ಪೂರ್ತಿ ಭಾಗಗಳು ಸಿಕ್ಕಿಲ್ಲ, ಕೆಲವು ಭಾಗಗಳು ಮಾತ್ರ ಸಿಕ್ಕಿದ್ದು, ಇನ್ನೂ ಆಳಕ್ಕೆ ತೆಗೆದು ಹುಡುಕಾಟ ನಡೆಸಲಾಗುತ್ತಿದೆ. ಇನ್ನೂ ಇದರ ಬಳಿಕ 7 ಹಾಗೂ 8ನೇ ಪಾಯಿಂಟ್‌ನಲ್ಲಿ ಉತ್ಖನನ ಕಾರ್ಯ ನಡೆಸುವ ಸಾಧ್ಯತೆಗಳಿವೆ