ಮಂಗಳೂರು: ಚಿನ್ನಯ್ಯ ಎಲ್ಲಿದ್ದ, ಎಲ್ಲಿ ವಾಸವಿದ್ದ, ಹಣ ಯಾರಿಂದ ಪಡೆದ ಎನ್ನುವುದ ಕುರಿತು ಎಸ್ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಇದರ ಬೆನ್ನಲ್ಲೇ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಅವರ ಸಹೋದರ ಮೋಹನ್ ಮನೆಯಲ್ಲಿ ಮಹಜರು ಮಾಡಿದ್ದು, ಇದೀಗ ಮಹೇಶ್ ಶೆಟ್ಟಿ ತಿಮರೋಡಿ ಮನೆಯಿಂದ ಮೂರು ತಲವಾರು ವಶಕ್ಕೆ ಪಡೆಯಲಾಗಿದೆ.
ನಿನ್ನೆ ತಡ ರಾತ್ರಿವರೆಗೂ ಅಧಿಕಾರಿಗಳು ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಜಾಲಾಡಿದ್ದಾರೆ. ಎಲ್ಲಾ ದಾಖಲೆಗಳನ್ನು ವಶಕ್ಕೆ ಪಡೆದು ರಿಪೋರ್ಟ್ ತಯಾರಿಸಿದ್ದಾರೆ. ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಪತ್ತೆಯಾದ ಮೂರು ತಲವಾರನ್ನು ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಮಹೇಶ್ ಶೆಟ್ಟಿ ತಿಮರೋಡಿ ಮನೆ ಮೇಲೆ ದಾಳಿ ಮಾಡುವ ಮೊದಲೇ ಮಹೇಶ್ ಶೆಟ್ಟಿ ಮನೆಯಿಂದ ತೆರಳಿದ್ದರು. ದಾಳಿ ವೇಳೆ ತಿಮರೋಡಿ ಮನೆಯಲ್ಲಿ ಇರಲಿಲ್ಲ. ಇತ್ತ ಮನೆ, ತೋಟ ಸೇರಿದಂತೆ ಎಲ್ಲಾ ಕಡೆ ಪರಿಶೋಧನೆ ನಡೆಸಿದ ಎಸ್ಐಟಿ ಅಧಿಕಾರಿಗಳು ಹಲವು ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ. ಮಹೇಶ್ ಶೆಟ್ಟಿ ಪತ್ನಿ, ಮಗ ಹಾಗೂ ಮಗಳ ಮೊಬೈಲ್ ಫೋನ್ ವಶಕ್ಕೆ ಪಡೆಯಲಾಗಿದೆ.