ಮಂಗಳೂರು:- ಧರ್ಮಸ್ಥಳ ಕೇಸ್ ಗೆ ಸಂಬಂಧಿಸಿದಂತೆ ಎಸ್‌ಐಟಿ ತನಿಖೆಗೆ ಟ್ವಿಸ್ಟ್ ಸಿಕ್ಕಿದೆ.
ನೇತ್ರಾವತಿ ನದಿ ದಡದ ಬಂಗ್ಲೆಗುಡ್ಡಕ್ಕೆ ಎಸ್‌ಐಟಿ ಎಂಟ್ರಿ ಕೊಟ್ಟಿದೆ. ತನಿಖಾಧಿಕಾರಿ ಜಿತೇಂದ್ರ ದಯಾಮ ನೇತೃತ್ವದಲ್ಲಿ ಸುಮಾರು 7 ಗಂಟೆಗಳ ಕಾಲ ಮಹಜರು ನಡೆಯಿತು. ಅರಣ್ಯ ಇಲಾಖೆ, ಲೋಕೋಪಯೋಗಿ ಇಲಾಖೆ, ಸೋಕೋ ಟೀಮ್, ಕಂದಾಯ ಇಲಾಖೆ, ಪಂಚಾಯತ್ ಸಿಬ್ಬಂದಿ ಮಹಜರಿನಲ್ಲಿ ಭಾಗಿಯಾಗಿದ್ದರು. 13 ಎಕರೆ ವಿಸ್ತೀರ್ಣದ ಬಂಗ್ಲೆಗುಡ್ಡದಲ್ಲಿ 5 ಕಡೆ ಮಹಜರು ನಡೆದಿದೆ. ಈ ವೇಳೆ 5 ತಲೆಬುರಡೆ, 113 ಮೂಳೆಗಳು ಸಿಕ್ಕಿವೆ ಎನ್ನಲಾಗಿದೆ.
ಪಾಯಿಂಟ್ 11ರ ಆಸುಪಾಸಿನಲ್ಲಿ ಭೂಮಿಯ ಮೇಲ್ಭಾಗದಲ್ಲೇ ಮಾನವನ ಮೂಳೆಗಳು ಪತ್ತೆಯಾಗಿವೆ. ಮೂಳೆ ಪತ್ತೆಯಾದ ಸ್ಥಳದಲ್ಲೇ ಬಟ್ಟೆಯ ತುಂಡುಗಳೂ ಪತ್ತೆಯಾಗಿವೆ. ಮೂಳೆಗಳನ್ನು ಪೈಪ್‌ಗಳಲ್ಲಿ ಸಂಗ್ರಹಿಸಿ, ಮಣ್ಣಿನ ಸ್ಯಾಂಪಲ್ ತೆಗೆದುಕೊಳ್ಳಲಾಗಿದೆ ಎನ್ನಲಾಗಿದೆ.
ಇನ್ನೂ ಧರ್ಮಸ್ಥಳದಲ್ಲಿ ನೂರಾರು ಶವ ಹೂತಿದ್ದೇನೆ ಎಂದು ಮಾಸ್ಕ್ ಮ್ಯಾನ್ ಚಿನ್ನಯ್ಯ ಹೇಳಿಕೊಂಡು ಬಂದಾಗಿನಿಂದ ಧರ್ಮಸ್ಥಳ ಪ್ರಕರಣ ಭಾರೀ ಚುರುಕು ಪಡೆದುಕೊಂಡಿದೆ. ಆರಂಭದಲ್ಲಿ ನೇತ್ರಾವತಿ ಸುತ್ತ ಮುತ್ತ ಎಸ್‌ಐಟಿ ಬುರುಡೆಗಾಗಿ ಶೋಧ ನಡೆಸಿ, ಏನೂ ಸಿಗದೆ ವಾಪಾಸಾಗಿತ್ತು. ಆದ್ರೆ ಧರ್ಮಸ್ಥಳ ಪ್ರಕರಣ ಮತ್ತೊಂದು ಹಾದಿ ಹಿಡಿದಿದೆ. ಇದೀಗ ನೇತ್ರಾವತಿಯಿಂದ ಬಂಗ್ಲೆಗುಡ್ಡೆಗೆ ಪಯಣ ಬೆಳೆಸಿರುವ ಎಸ್‌ಐಟಿಗೆ ಹಲವಾರು ಕಳೇಬರಗಳು ಪತ್ತೆಯಾಗಿದೆ ಎಂದು ಹೇಳಲಾಗಿದೆ.



