ಬೆಂಗಳೂರು: ಧರ್ಮಸ್ಥಳ ಪ್ರಕರಣವನ್ನು ಯಾವುದೇ ಕಾರಣಕ್ಕೂ ಎನ್ಐಎ ತನಿಖೆಗೆ ನೀಡೋದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.
Advertisement
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪ್ರಕರಣ ಬಗ್ಗೆ ಎಸ್ಐಟಿ ತನಿಖೆ ನಡೆಯುತ್ತಿದೆ. ವರದಿ ಬಂದಿಲ್ಲ. ತನಿಖೆಯ ಹಂತದಲ್ಲಿರುವ ಪ್ರಕರಣವನ್ನು ಯಾವುದೇ ಕಾರಣಕ್ಕೂ ಎನ್ಐಎ ತನಿಖೆಗೆ ನೀಡೋದಿಲ್ಲ.
ಅದರ ಅಗತ್ಯವೂ ಇಲ್ಲ ಎಂದು ಹೇಳಿದ್ದಾರೆ. ಎಸ್ಐಟಿ ತನಿಖೆ ನಡೆಯುತ್ತಿದ್ದು, ಇಲ್ಲಿ ಯಾವ ಲೋಪವಿದೆ. ಎಸ್ಐಟಿ ತನಿಖೆ ಮುಗಿದು ವರದಿ ಬರೋವರೆಗೂ ಬೇರೆ ಯಾವುದೇ ತನಿಖೆ ಇಲ್ಲ. ಅಲ್ಲದೇ ಎಸ್ಐಟಿ ತನಿಖೆಯಲ್ಲಿಯೂ ಏನೂ ಸಮಸ್ಯೆ ಇಲ್ಲ ಎಂದಿದ್ದಾರೆ.