ಧರ್ಮಸ್ಥಳ ಪ್ರಕರಣ: ಯಾವುದೇ ಒತ್ತಡಕ್ಕೂ ಮಣಿಯುವುದಿಲ್ಲ – ಸಿಎಂ ಸಿದ್ದರಾಮಯ್ಯ

0
Spread the love

ಮೈಸೂರು: ಧರ್ಮಸ್ಥಳ‌ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಒತ್ತಡಕ್ಕೂ ಮಣಿಯುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,

Advertisement

ಸರ್ಕಾರ ಈ ಬಗ್ಗೆ ಕಾನೂನು ಕ್ರಮ ತೆಗೆದುಕೊಳ್ಳಲಿದೆ. ಪ್ರಕರಣಕ್ಕೆ ಸಂಬಂಧಿಸಿದ ವ್ಯಕ್ತಿ ಹತ್ತುವರ್ಷಗಳ ನಂತರ ಬಂದು ಪೊಲೀಸರಿಗೆ ಹೇಳಿಕೆ ನೀಡಿದ್ದಾನೆ. ಪೊಲೀಸ್ ಇಲಾಖೆಯೊಂದಿಗೆ ಚರ್ಚಿಸಿ ಎಸ್ ಐ ಟಿ ತನಿಖೆಯ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ಪ್ರಕರಣದ ತನಿಖೆಯ ವಿಷಯದಲ್ಲಿ ಸರ್ಕಾರ ಯಾವುದೇ ಒತ್ತಡಕ್ಕೆ ಮಣಿಯದೇ , ಕಾನೂನು ರೀತ್ಯ ಕ್ರಮ ಕೈಗೊಳ್ಳುತ್ತೇವೆ ಎಂದರು.

ಇನ್ನೂ ಬೆಂಗಳೂರಿನ ಸುಮಾರು 40 ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಇದು ಹುಸಿ ಬಾಂಬ್ ಕರೆಯಿರಬಹುದೇ ಎಂಬ ಬಗ್ಗೆ ತನಿಖೆ ನಡೆಸಲು ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದರು. ಸುಳ್ಳು ಹೇಳಿ ಅಪಪ್ರಚಾರ , ಪ್ರಚೋದನೆಗೊಳಿಸುವ ಕೃತ್ಯಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳಲು ಕಾನೂನು ರೂಪಿಸಲಾಗುತ್ತಿದೆ ಎಂದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಹೆಸರಿಗೆ ಕಾಂಗ್ರೆಸ್ ಸೂಚಿಸಲಿ ಎಂಬ ಬಿಜೆಪಿಯವರ ಹೇಳಿಕೆಗೆ ಪ್ರತಿಕ್ರಿಯೆ ನೀಡುತ್ತಾ, ಈ ರೀತಿ ಹೇಳಿಕೆ ನೀಡುತ್ತಿರುವ ಬಿಜೆಪಿಯ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಬಿಜೆಪಿ ಅಧ್ಯಕ್ಷಗಿರಿಯನ್ನು ಎಸ್ ಸಿ ವರ್ಗದವರಿಗೆ ಬಿಟ್ಟುಕೊಡಲಿ ಮತ್ತು ದೇಶದ ಪ್ರಧಾನಿ ಸ್ಥಾನವನ್ನು ಪರಿಶಿಷ್ಟ ಜಾತಿಗೆ ಸೇರಿದವರಿಗೆ ಮೊದಲು ಬಿಟ್ಟುಕೊಡಲಿ ಎಂದರು. ಸಂವಿಧಾನ ಬದ್ಧವಾಗಿ ಸಾಮಾಜಿಕ ನ್ಯಾಯದ ಪರವಾಗಿರುವುದು ಕಾಂಗ್ರೆಸ್ ಪಕ್ಷವೇ ಹೊರತು ಬಿಜೆಪಿ ಪಕ್ಷವಲ್ಲ ಎಂದರು.

ಆರ್ ಸಿ ಬಿ ವಿಜಯೋತ್ಸವದ ವೇಳೆ ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ಆಯೋಗದ ವರದಿಯ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ,  . ಮುಂದಿನ ಸಚಿವ ಸಂಪುಟದಲ್ಲಿ ತನಿಖಾ ವರದಿಯ ಬಗ್ಗೆ ಚರ್ಚಿಸಿ ಸೂಕ್ತ ತೀರ್ಮಾನವನ್ನು ಕೈಗೊಳ್ಳಲಾಗುವುದು ಎಂದರು.


Spread the love

LEAVE A REPLY

Please enter your comment!
Please enter your name here