ವಿಜಯಸಾಕ್ಷಿ ಸುದ್ದಿ, ಗದಗ: ಭಾರತೀಯ ಜನತಾ ಪಾರ್ಟಿ ಗದಗ ಜಿಲ್ಲಾ ಕಾರ್ಯಾಲಯದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಮನದ ಮಾತು (ಮನ್ ಕೀ ಬಾತ್) ಕಾರ್ಯಕ್ರಮ ಹಾಗೂ ಧರ್ಮಸ್ಥಳದಲ್ಲಿ ಸೆಪ್ಟೆಂಬರ್ 1ರಂದು ನಡೆಯುವ ಸಮಾವೇಶದ ಕುರಿತು ಪೂರ್ವಭಾವಿ ಸಭೆ ಜರುಗಿತು.
Advertisement
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಸವರಾಜ ಕೆಲಗಾರ, ಗದಗ ಜಿಲ್ಲಾಧ್ಯಕ್ಷ ತೋಟಪ್ಪ (ರಾಜು) ಕುರುಡಗಿ, ಶಾಸಕ ಡಾ. ಚಂದ್ರು ಲಮಾಣಿ, ಪಕ್ಷದ ಚುನಾವಣಾಧಿಕಾರಿ ಶಶಿಮೌಳಿ ಕುಲಕರ್ಣಿ, ಸಹ ಚುನಾವಣಾಧಿಕಾರಿ ಎಂ.ಎಸ್. ಕರೀಗೌಡ್ರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಿಂಗರಾಜ ಪಾಟೀಲ ಮಲ್ಲಾಪೂರ, ಆರ್.ಕೆ. ಚವ್ಹಾಣ, ಪಕ್ಕಿರೇಶ ರಟ್ಟಿಹಳ್ಳಿ, ಬಿ.ಡಿ. ಪಲ್ಲೇದ, ಬಿಜೆಪಿ ಮಂಡಲಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಮನ್ ಕೀ ಬಾತ್ ಸಂಚಾಲಕರು, ಮುಖಂಡರು ಉಪಸ್ಥಿತರಿದ್ದರು.