ಧರ್ಮಸ್ಥಳ ತಲೆ ಬುರುಡೆ ಕೇಸ್ ಬಗ್ಗೆ ಎಐ ವಿಡಿಯೋ ಮಾಡಿ, ಕಣ್ಣಿಗೆ ಕಟ್ಟಿದಂತೆ ವಿವರಿಸಿದ್ದ ಯೂಟ್ಯೂಬರ್ ಸಮೀರ್ ಅವರು ಮತ್ತೊಂದು ವಿಡಿಯೋ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ.
ಇಂದು ನನಗೆ ವಾಸಿಸಲು ಮನೆ ಇಲ್ಲ. ಪೊಲೀಸ್ ವಿಚಾರಣೆ ಬಳಿಕ ನನಗೆ ಬಾಡಿಗೆ ಮನೆ ಸಿಗುತ್ತಿಲ್ಲ ಎಂದು ವಿಡಿಯೋನಲ್ಲಿ ಅಳಲು ತೋಡಿಕೊಂಡಿದ್ದಾನೆ. ಕಳೆದ ಒಂದೂವರೆ ತಿಂಗಳಿನಿಂದ ನನ್ನ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಲಾಗಿದೆ. ವಿದೇಶದಿಂದ ನನಗೆ ಫಂಡಿಂಗ್ ಆಗಿದೆ ಎಂದು ಆರೋಪಿಸಲಾಗಿದೆ. ಆದರೆ ನನಗೆ ಯಾವುದೇ ರೀತಿಯ ವಿದೇಶಿ ಹಣ ಬಂದಿಲ್ಲ ಎಂದು ಸ್ಪಷ್ಪಪಡಿಸಿದ್ದಾರೆ.
ತನ್ನ ಬ್ಯಾಂಕ್ ಖಾತೆಗೆ ಯಾವುದೇ ಫಂಡಿಂಗ್ ಆಗಿಲ್ಲ ಎಂಬ ಬಗ್ಗೆ ತನ್ನ ಬಳಿ ಇರುವ ಎರಡು ಬ್ಯಾಂಕ್ ಖಾತೆಗಳ ವಿವರವನ್ನು ನೀಡಿದ್ದಾರೆ. ಈ ಬಗ್ಗೆ ಪೊಲೀಸರಿಗೆ ಎಲ್ಲಾ ದಾಖಲೆಗಳನ್ನು ನೀಡಿದ್ದೇನೆ. ನನ್ನ ವಿರುದ್ಧದ ಆರೋಪಗಳು ಸುಳ್ಳು ಎಂದಿದ್ದಾರೆ.



