ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗಳು ಜನಪರ

0
Spread the love

ವಿಜಯಸಾಕ್ಷಿ ಸುದ್ದಿ, ಮುಳಗುಂದ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗಳು ಜನಪರವಾದ ಯೋಜನೆಗಳಾಗಿವೆ ಎಂದು ಪ.ಪಂ ಸದಸ್ಯ ವಿಜಯ ನೀಲಗುಂದ ಹೇಳಿದರು.

Advertisement

ಅವರು ಪಟ್ಟಣದ ಬಾಲಲೀಲಾ ಮಾಹಾಂತ ಶಿವಯೋಗಿಗಳ ಗವಿಮಠದಲ್ಲಿ ಜರುಗಿದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಶಿರಹಟ್ಟಿ/ಲಕ್ಷ್ಮೇಶ್ವರ ತಾಲೂಕಾ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಮುಳಗುಂದ ಸಂಯುಕ್ತಾಶ್ರಯದಲ್ಲಿ ಸಾಮೂಹಿಕ ಲಕ್ಷ್ಮಿ ಪೂಜೆ ಕಾರ್ಯಕ್ರಮದ ನಂತರ ಸಾಧಕರನ್ನು ಗೌರವಿಸಿ ಮಾತನಾಡುತ್ತಿದ್ದರು.

ಗ್ರಾಮೀಣ ಭಾಗದ ಜನರ ಆರ್ಥಿಕ ಅಭಿವೃದ್ಧಿಪರ ಚಿಂತನ-ಮAಥನದ ಭಾಗವಾಗಿ ರೈತರ, ಮಹಿಳಾ ಸರಲೀಕರಣ, ಸಮುದಾಯದ ಅಭಿವೃದ್ಧಿಗೆ ಬೇಕಾಗುವ ಕಾರ್ಯಕ್ರಮಗಳನ್ನು ನೇರವಾಗಿ ಜನರಿಗೆ ತಲುಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದು, ಇದರಿಂದ ಜನರು ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಸಹಕಾರಿಯಾಗಿದೆ. ಧರ್ಮಸ್ಥಳ ಗ್ರಾಮಾಭಿವೃದ್ಧಿಯ ಕಾರ್ಯ ಶ್ಲಾಘನೀಯ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಂ.ಡಿ. ಬಟ್ಟೂರ ವಹಿಸಿದ್ದರು. ಪ.ಪಂ ಸದಸ್ಯ ಎಸ್.ಸಿ. ಬಡ್ನಿ, ತಾಲೂಕಾ ಯೋಜನಾಧಿಕಾರಿ ಪುನಿತ ಓಲೇಕಾರ, ಡಾ. ಎಸ್.ಸಿ. ಚವಡಿ, ಬಸವರಾಜ ಸುಂಕಾಪೂರ, ಮುಳಗುಂದ ವಲಯ ಮೇಲ್ವಿಚಾರಕಿ ಬಿ.ಶಾಂತಾ, ಯೋಗ ಶಿಕ್ಷಕ ಪ್ರಕಾಶ ಮದ್ದಿನ, ಶಿವಾನಂದ ಹುಣಶಿಮರದ ಹಾಗೂ ಸೇವಾ ಪ್ರತಿನಿದಿಗಳು ಇದ್ದರು.


Spread the love

LEAVE A REPLY

Please enter your comment!
Please enter your name here