ಮಂಗಳೂರು:- ಐತಿಹಾಸಿಕ ಹಿನ್ನೆಲೆ ಹೊಂದಿರುವ ಧರ್ಮಸ್ಥಳದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.
ಜೀಪು ಚಾಲಕ ಸೋಮನಾಥ ಸಪಲ್ಯ (48) ಬಂಧಿತ ಆರೋಪಿ. ಈತ ಧರ್ಮಸ್ಥಳ ಗ್ರಾಮ ಕನ್ಯಾಡಿ ನಿವಾಸಿ ಎನ್ನಲಾಗಿದೆ. ಸದ್ಯ ಆರೋಪಿಯನ್ನು ಪೊಲೀಸರು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಧರ್ಮಸ್ಥಳ ವಿಚಾರದಲ್ಲಿ ಸುಳ್ಳುಸುದ್ದಿ ಹಬ್ಬಿಸುತ್ತಿದ್ದಾರೆಂದು ಆರೋಪಿಸಿ ಯೂಟ್ಯೂಬರ್‌ಗಳ ಮೇಲೆ ಸ್ಥಳೀಯರು ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 150ಕ್ಕೂ ಅಧಿಕ ಜನರ ವಿರುದ್ಧ ಪ್ರತ್ಯೇಕ ಎಫ್‌ಐಆರ್ ದಾಖಲಾಗಿದೆ.
ಇನ್ನೂ ಸಾಮಾಜಿಕ ಜಾಲತಾಣದಲ್ಲಿ ಧರ್ಮಸ್ಥಳ ಕ್ಷೇತ್ರಕ್ಕೆ ನಿರಂತರ ಅವಮಾನ ಮಾಡುತ್ತಿರುವುದನ್ನು ಖಂಡಿಸಿ ಕ್ಷೇತ್ರದ ಭಕ್ತರು ಸಿಡಿದೆದ್ದಿದ್ದಾರೆ. ಸುಳ್ಳು ಸುದ್ದಿ ಹರಡುತ್ತಿರುವ ಯೂಟ್ಯೂಬ್ ವಾಹಿನಿಗಳ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.



