ಧಾರವಾಡ:- ಧಾರವಾಡ ಜಿಲ್ಲೆಯ ಗರಗ ಪೊಲೀಸ್ ಠಾಣೆ ವ್ಯಾಪ್ತಿಯ ಮುಲ್ಲಾ ಡಾಬಾ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಗದಗದ ತಾಯಿ ಮತ್ತು ಮಗ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
Advertisement
ಕೊಲ್ಲಾಪುರದ ಮಹಾಲಕ್ಷ್ಮೀ ದೇವಿಯ ದರ್ಶನ ಪಡೆದು ಬಾಳು ಮಾಮಾನ ದೇವಾಲಯಕ್ಕೆ ಹೋಗಿ ಮರಳುತ್ತಿದ್ದ ವೇಳೆ, ಕ್ರೂಸರ್ ವಾಹನದ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ.
ಈ ಅಪಘಾತದಲ್ಲಿ ಗದಗದ ಹುಡ್ಕೋ ಕಾಲನಿಯ ನಿವಾಸಿಗಳಾದ ಮಹಾಂತಮ್ಮ ಬಸವಣೆಪ್ಪ ತುಪ್ಪದ (95) ಹಾಗೂ ಅವರ ಪುತ್ರ ಸುರೇಶ ಬಸವಣೆಪ್ಪ ತುಪ್ಪದ (52) ಮೃತಪಟ್ಟಿದ್ದಾರೆ. ಕ್ರೂಸರ್ನಲ್ಲಿದ್ದ ಮಕ್ಕಳು, ಮಹಿಳೆಯರು ಸೇರಿ ಹತ್ತಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಘಟನೆಯ ಮಾಹಿತಿ ಪಡೆದ ಗರಗ ಠಾಣೆಯ ಪೊಲೀಸರು ಕೂಡಲೇ ಸ್ಥಳಕ್ಕೆ ಧಾವಿಸಿ, ಗಾಯಾಳುಗಳನ್ನು ಧಾರವಾಡದ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.