ಧಾರವಾಡ:- ಚಾಲಕನ ನಿಯಂತ್ರಣ ತಪ್ಪಿ ಇನ್ನೋವಾ ಕಾರೊಂದು ಬ್ಯಾರಿಕೇಡ್ ಗೆ ಗುದ್ದಿದ ಘಟನೆ ಧಾರವಾಡದ ಟೋಲ್ ನಾಕಾ ಬಳಿ ಜರುಗಿದೆ. ಧಾರವಾಡದಿಂದ ಹುಬ್ಬಳ್ಳಿಗೆ ತೆರಳುವಾಗ ಈ ಅಪಘಾತ ಸಂಭವಿಸಿದೆ.
Advertisement
ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕಾರಿನಲ್ಲಿದ್ದ ಇಬ್ಬರಿಗೆ ಸಣ್ಣಪುಟ್ಟ ಗಾಯವಾಗಿದೆ. ಕೂಡಲೇ ಸ್ಥಳಕ್ಕೆ ಎಸಿಪಿ ಪ್ರಶಾಂತ ಸಿದ್ದನಗೌಡರು ಭೇಟಿ ನೀಡಿ ಪರಿಶೀಲನೆ ಮಾಡಿದರು.
ಧಾರವಾಡ ಸಂಚಾರಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.