ಧಾರವಾಡ: ಆಕಸ್ಮಿಕ ಬೆಂಕಿ ತಗುಲಿ ಹತ್ತಿ ಬೀಜ ಹೊತ್ತು ಸಾಗುತ್ತಿದ್ದ ಕ್ಯಾಂಟರ್ ಹೊತ್ತಿ ಉರಿದ ಘಟನೆ ಜಿಲ್ಲೆಯ ಬೈಪಾಸ್‌ನಲ್ಲಿ ನಡೆದಿದೆ. ಹುಬ್ಬಳ್ಳಿಯಿಂದ ಬೆಳಗಾವಿ ಕಡೆಗೆ ಈ ಕ್ಯಾಂಟರ್ ವಾಹನ ಹೋಗುತ್ತಿತ್ತು. ಈ ವೇಳೆ ವಾಹನದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ವಾಹನ ನಡು ರಸ್ತೆಯಲ್ಲೇ ಹೊತ್ತಿ ಉರಿದಿದೆ.
Advertisement
ಈ ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ದಳದವರು ಹಾಗೂ ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಬಂದು ಬೆಂಕಿ ನಂದಿಸುವ ಕೆಲಸ ಮಾಡಿದರು. ಅಷ್ಟರಲ್ಲಾಗಲೇ ವಾಹನ ಭಾಗಶಃ ಸುಟ್ಟಿತ್ತು. ಇನ್ನೂ ಧಾರವಾಡ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.