ಧಾರವಾಡ:- ಕರ್ನಾಟಕದಾದ್ಯಂತ ಇತ್ತೀಚೆಗೆ ಸುರಿಯುತ್ತಿರುವ ಭಾರೀ ಮಳೆಯಿಂದ ಸಾಕಷ್ಟು ಅವಾಂತರಗಳು ಸೃಷ್ಟಿ ಆಗಿದೆ.
ಅದರಂತೆ ಧಾರವಾಡದಲ್ಲಿ ಸುರಿದ ಭಾರೀ ಮಳೆಯಿಂದ ತಾಲೂಕಿನ ದಾಸನಕೊಪ್ಪ ಗ್ರಾಮದ ಬಳಿ ಸಣ್ಣ ಹಳ್ಳ ತುಂಬಿ ಹರಿಯುತ್ತಿದೆ. ಇದರಿಂದ ಧಾರವಾಡ ಲಕಮಾಪೂರ ರಸ್ತೆ ಕಡಿತವಾಗಿತ್ತು. ಈಗ ನೀರಿನ ಪ್ರಮಾಣ ಕಡಿಮೆಯಾದ ಹಿನ್ನೆಲೆ ಸಂಚಾರ ಆರಂಭಗೊಂಡಿದೆ.
ಹೊಲದ ಬದು ಕೂಡಾ ಕೊಚ್ಚಿ ಹೋಗಿವೆ. ಮತ್ತೊಂದು ಕಡೆ ಬೆಣ್ಣಿ ಹಳ್ಳ ಮತ್ತು ತುಪ್ರಿ ಹಳ್ಳದಲ್ಲಿ ನೀರಿನ ಪ್ರಮಾಣ ಏರಿಕೆಯಾಗಿದೆ. ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ತಡ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಹಳ್ಳಗಳು ತುಂಬಿ ಹರಿಯುತ್ತಿದ್ದು, ಸಾಕಷ್ಟು ಅವಾಂತರ ಸೃಷ್ಟಿ ಆಗಿದೆ.



