ಕೋಲ್ಕತ್ತಾದ ಈಡನ್ ಗಾರ್ಡನ್‌ನಲ್ಲಿ ಬುಧವಾರ ನಡೆದ ಐಪಿಎಲ್ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ತಂಡವು 2 ವಿಕೆಟ್ ಗಳ ರೋಚಕ ಜಯ ಸಾಧಿಸಿದೆ.
Advertisement
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ರಹಾನೆ ಪಡೆ 20 ಓವರ್‌ಗೆ 6 ವಿಕೆಟ್ ನಷ್ಟಕ್ಕೆ 179 ರನ್ ಕಲೆ ಹಾಕಿತು. 180 ರನ್ ಗುರಿ ಬೆನ್ನತ್ತಿದ ಸಿಎಸ್‌ಕೆ 19.4 ಓವರ್‌ಗೆ 8 ವಿಕೆಟ್ ಕಳೆದುಕೊಂಡು ಗುರಿ ತಲುಪಿ ಗೆಲುವು ದಾಖಲಿಸಿತು.
ಕೆಕೆಆರ್ ಪರ ಅಜಿಂಕ್ಯಾ ರಹಾನೆ 48, ಮನಿಶ್ ಪಾಂಡೆ (ಔಟಾಗದೇ) 36, ಆಂಡ್ರೆ ರಸೆಲ್ 38 ರನ್ ಗಳಿಸಿದ್ದು ಬಿಟ್ಟರೆ ಉಳಿದಂತೆ ಬ್ಯಾಟರ್‌ಗಳು ನಿರಾಸೆ ಮೂಡಿಸಿದರು. ಆರಂಭಿಕರಾದ ರಹಮಾನುಲ್ಲಾ ಗುರ್ಬಾಜ್ 11, ಸುನಿಲ್ ನರೇನ್ 26 ರನ್ ಗಳಿಸಲಷ್ಟೇ ಶಕ್ತರಾದರು. ಉಳಿದಂತೆ ಬ್ಯಾಟರ್‌ಗಳು ಕಳಪೆ ಪ್ರದರ್ಶನ ತೋರಿದರು. ಈ ಮೂಲಕ ತವರಲ್ಲಿ ಕೆಕೆಆರ್ ಗೆ ಮುಖಭಂಗವಾಗಿದೆ.