ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕ ಸರ್ಕಾರದ 2025-26ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಡಿಜಿಟಲ್ ಇ-ಸ್ಟಾಂಪ್ ವ್ಯವಸ್ಥೆಯನ್ನು ರಾಜ್ಯದ ಎಲ್ಲ ಜಿಲ್ಲೆಗಳಿಗೂ ವಿಸ್ತರಿಸಲಾಗುವುದೆಂದು ಘೋಷಿಸಲಾಗಿದೆ. ಈ ಕಾರಣದಿಂದಾಗಿ ಡಿಜಿಟಲ್ ಇ-ಸ್ಟಾಂಪ್ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ವಿಸ್ತರಿಸಲು ನಿರ್ಧರಿಸಲಾಗಿದೆ.
ಡಿಜಿಟಲ್ ಇ-ಸ್ಟಾಂಪ್ ವ್ಯವಸ್ಥೆಯು ಸಾರ್ವಜನಿಕರಿಗೆ ಹಲವಾರು ರೀತಿಯಲ್ಲಿ ಉಪಯುಕ್ತವಾಗಲಿದೆ. ನೋಂದಣಿಯೇತರ ದಸ್ತಾವೇಜಿನಲ್ಲಿ ಪಾರದರ್ಶಕತೆಯನ್ನು ಹೆಚ್ಚಿಸುತ್ತದೆ. ಡಿಜಿಟಲ್ ಇ-ಸ್ಟಾಂಪ್ ವಿಳಂಬವನ್ನು ತಡೆಗಟ್ಟುತ್ತದೆ. ಸ್ಥಳೀಯ ನಾಗರಿಕರು ಯಾವುದೇ ಮಧ್ಯವರ್ತಿಗಳ ನೆರವಿಲ್ಲದೆ ಸ್ವತಃ ಆನ್‌ಲೈನ್‌ನಲ್ಲಿ ಕರಡು ತಯಾರಿಸಿ ಇ-ಸ್ಟಾಂಪ್ ಸೃಜಿಸಿಕೊಳ್ಳಬಹುದು. ಈ ಸೇವೆ 24 7 ಲಭ್ಯ. ಸಂಪೂರ್ಣ ಪ್ರಕ್ರಿಯೆಯು ಡಿಜಿಟಲ್ ಆಗಿದ್ದು ಸುರಕ್ಷತೆ, ವೇಗದ ಎಲೆಕ್ಟ್ರಾನಿಕ್ ಪಾವತಿಗಳನ್ನು 247 ಮಾಡಬಹುದು. ಸ್ಟಾಂಪ್ ವಿಷಯವು ದಸ್ತಾವೇಜಿನ ಅವಿಭಾಜ್ಯವಾಗುತ್ತದೆ. ಇದು ದುರುಪಯೋಗವನ್ನು ತಡೆಯುತ್ತದೆ. ಆಧಾರ್ ಆಧಾರಿತ ಇ-ಸೈನ್ ಅಥವಾ ಡಿಎಸ್‌ಸಿ ಬಳಸಿ ದಸ್ತಾವೇಜುಗಳಿಗೆ ಡಿಜಿಟಲ್ ಸಹಿ ಮಾಡಬಹುದು. ಈ ವ್ಯವಸ್ಥೆ ಸುರಕ್ಷಿತ, ವಿಶ್ವಾಸಾರ್ಹ ಮತ್ತು ನಿರಂತರವಾಗಿ 24*7 ಲಭ್ಯವಿದೆ.
ಸಾರ್ವಜನಿಕರು ಡಿಜಿಟಲ್ ಇ-ಸ್ಟಾಂಪ್ ಸೌಲಭ್ಯವನ್ನು ಸದುಪಯೋಗಪಡಿಸಿಕೊಂಡು ನೋಂದಣಿಯೇತರ ದಸ್ತಾವೇಜುಗಳಿಗೆ ಉಪಯೋಗಿಸಲು ತಿಳಿಸಿದೆ. hಣಣಠis://ಞಚಿveಡಿi.ಞಚಿಡಿಟಿಚಿಣಚಿಞಚಿ.gov.iಟಿ ಈ ಲಿಂಕನ್ನು ಬಳಸಿ ಡಿಜಿಟಲ್ ಇ-ಸ್ಟಾಂಪ್‌ನ್ನು ಪಡೆದುಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



