HomeBengaluru News‘ಬಿಜೆಪಿಗೆ, ರಾಜ್ಯಕ್ಕೆ ತುಂಬಲಾರದ ನಷ್ಟ’: ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನಕ್ಕೆ ಗಣ್ಯರ ಕಂಬನಿ

‘ಬಿಜೆಪಿಗೆ, ರಾಜ್ಯಕ್ಕೆ ತುಂಬಲಾರದ ನಷ್ಟ’: ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನಕ್ಕೆ ಗಣ್ಯರ ಕಂಬನಿ

For Dai;y Updates Join Our whatsapp Group

ಬೆಂಗಳೂರು: ಮಾಜಿ ಶಿಕ್ಷಣ ಸಚಿವ ಹಾಗೂ ತಿಪಟೂರು ಮಾಜಿ ಶಾಸಕ ಬಿ.ಸಿ. ನಾಗೇಶ್ ಅವರ ನಿಧನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಸಾಮಾಜಿಕ ಜಾಲತಾಣಗಳ ಮೂಲಕ ನಾಯಕರು ನಾಗೇಶ್ ಅವರ ನಿಧನಕ್ಕೆ ಶೋಕ ವ್ಯಕ್ತಪಡಿಸಿದ್ದಾರೆ.

ಬಿ.ಸಿ. ನಾಗೇಶ್ ಅವರು ಅಜಾತಶತ್ರು ಸ್ವಭಾವದವರಾಗಿದ್ದು, ಎಲ್ಲರೊಂದಿಗೂ ಆತ್ಮೀಯವಾಗಿ ಬೆರೆಯುತ್ತಿದ್ದರು. ಅವರ ಅಗಲಿಕೆ ಬಿಜೆಪಿಗೆ ತುಂಬಲಾರದ ನಷ್ಟ ತಂದಿದೆ ಎಂದು ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ದುಃಖಿತ ಕುಟುಂಬಕ್ಕೆ ಈ ನೋವನ್ನು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸಿದ್ದಾರೆ.

ಎಂಎಲ್‌ಸಿ ಸಿ.ಟಿ. ರವಿ ಅವರು ನಾಗೇಶ್ ಅವರನ್ನು ಮೃದು ಹೃದಯದ ವ್ಯಕ್ತಿ ಹಾಗೂ ರಾಜಕೀಯವನ್ನು ಮೀರಿ ಜನಪ್ರೀತಿ ಗಳಿಸಿದ್ದ ನಾಯಕ ಎಂದು ಸ್ಮರಿಸಿದ್ದಾರೆ. ಶಾಸಕರಾಗುವುದಕ್ಕೂ ಮುನ್ನವೇ ಎಬಿವಿಪಿಯಲ್ಲಿ ಸೇವೆ ಸಲ್ಲಿಸಿದ್ದ ಅವರು ಕೊನೆಯವರೆಗೂ ಪಕ್ಷ ಮತ್ತು ಜನಸೇವೆಯಲ್ಲಿ ತೊಡಗಿಸಿಕೊಂಡಿದ್ದರು. ಆತ್ಮೀಯ ಸ್ನೇಹಿತನನ್ನು ಕಳೆದುಕೊಂಡಿರುವುದು ನೋವಿನ ಸಂಗತಿ ಎಂದು ಹೇಳಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಗೇಶ್ ಅವರನ್ನು ‘ಸರಳ, ಸಜ್ಜನ ಜೆಂಟಲ್‌ಮ್ಯಾನ್ ಇನ್ ಪಾಲಿಟಿಕ್ಸ್’ ಎಂದು ಬಣ್ಣಿಸಿದ್ದಾರೆ. ತಿಪಟೂರು ಕ್ಷೇತ್ರದ ಅಭಿವೃದ್ಧಿಗೆ ನಾಗೇಶ್ ಸಾಕಷ್ಟು ಶ್ರಮಿಸಿದ್ದರು. ವಿಶೇಷವಾಗಿ ನೀರಾವರಿ ಯೋಜನೆಗಳಿಗಾಗಿ ಕೆಲಸ ಮಾಡಿದ್ದರು ಎಂದು ಸ್ಮರಿಸಿದ್ದಾರೆ.

ತಮ್ಮ ಮುಖ್ಯಮಂತ್ರಿತ್ವದ ಅವಧಿಯಲ್ಲಿ ನಾಗೇಶ್ ಶಿಕ್ಷಣ ಸಚಿವರಾಗಿ ಹೊಸ ಶಿಕ್ಷಣ ನೀತಿ ಜಾರಿಗೆ ತರಲು ಶ್ರಮಿಸಿದ್ದರು. ಅವರ ನಿಧನ ಬಿಜೆಪಿಗೆ ಮಾತ್ರವಲ್ಲದೆ ರಾಜ್ಯಕ್ಕೂ ಹಾಗೂ ವೈಯಕ್ತಿಕವಾಗಿ ತಮ್ಮಿಗೂ ದೊಡ್ಡ ನಷ್ಟ ಎಂದು ಬೊಮ್ಮಾಯಿ ಹೇಳಿದ್ದಾರೆ.

67 ವರ್ಷದ ಬಿ.ಸಿ. ನಾಗೇಶ್ ಅವರು ಕಳೆದ ಒಂದು ವರ್ಷದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಎರಡು ಬಾರಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಅವರು ಬೆಂಗಳೂರಿನ ಜಯನಗರದಲ್ಲಿರುವ ಪುತ್ರಿಯ ನಿವಾಸದಲ್ಲಿ ಮಂಗಳವಾರ ನಿಧನರಾದರು.

ನಾಗೇಶ್ ಅವರ ಪಾರ್ಥಿವ ಶರೀರವನ್ನು ಮಲ್ಲೇಶ್ವರಂನ ಬಿಜೆಪಿ ಕಚೇರಿಗೆ ತರಲಾಗಿದ್ದು, ಸಾರ್ವಜನಿಕರು ಹಾಗೂ ಪಕ್ಷದ ಕಾರ್ಯಕರ್ತರಿಗೆ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಬಿ.ವೈ. ವಿಜಯೇಂದ್ರ, ಸಿ.ಟಿ. ರವಿ, ರವಿಕುಮಾರ್ ಸೇರಿದಂತೆ ಹಲವು ಬಿಜೆಪಿ ನಾಯಕರು ಅಂತಿಮ ದರ್ಶನ ಪಡೆದಿದ್ದಾರೆ.

ನಾಗೇಶ್ ಅವರ ಅಂತ್ಯಕ್ರಿಯೆ ತಿಪಟೂರಿನ ಸ್ವಗೃಹದಲ್ಲಿ ನಡೆಯಲಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img