ಮಂಗಳೂರು: ಮಂಗಳೂರು ಹೊರವಲಯ ಸುರತ್ಕಲ್ ಬಳಿ ಹೃದಯಾಘಾತದಿಂದ ಡಿಪ್ಲೋಮಾ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ನಡೆದಿದೆ. ಮೃತನನ್ನು ಅಫ್ತಾಬ್ (18) ಎಂದು ಗುರುತಿಸಲಾಗಿದೆ. ಅಫ್ತಾಬ್ ತನ್ನ ಕುಟುಂಬದೊಂದಿಗೆ ಸುರತ್ಕಲ್ ಕೃಷ್ಣಾಪುರದಲ್ಲಿ ವಾಸವಾಗಿದ್ದ.
Advertisement
ಮನೆಯಲ್ಲಿ ಸ್ನಾನಕ್ಕೆಂದು ಹೋಗುತ್ತಿದ್ದ ವೇಳೆ ಅಫ್ತಾಬ್ ಹೃದಯಾಘಾತಕ್ಕೊಳಗಾಗಿ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ. ತಕ್ಷಣವೇ ಆತನನ್ನು ಆಸ್ಪತ್ರೆಗೆ ಕರೆತರಲಾಯಿತು.
ಆದ್ರೆ ಜೀವ ಉಳಿಸಲು ಸಾಧ್ಯವಾಗಲಿಲ್ಲ. ಅಫ್ತಾಬ್ ಸುರತ್ಕಲ್‌ನ ಸೆಕ್ರೆಡ್ ಹಾರ್ಟ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಇಲೆಕ್ಟ್ರಿಕಲ್ ಇಂಜಿನಿಯರಿಂಗ್ ಡಿಪ್ಲೋಮಾ ಓದುತ್ತಿದ್ದನು. ಈ ಘಟನೆಯು ಸ್ಥಳೀಯರಲ್ಲಿ ದುಃಖದ ಛಾಯೆ ಮೂಡಿಸಿದೆ.