ನಟಿ ರಚಿತಾ ರಾಮ್ ವಿರುದ್ಧ ನಿರ್ದೇಶಕ ನಾಗಶೇಖರ್, ನಟ ಶ್ರೀನಗರ ಕಿಟ್ಟಿ ದೂರು

0
Spread the love

ಕನ್ನಡ ಚಿತ್ರರಂಗದ ಖ್ಯಾತ ನಟ ರಚಿತಾ ರಾಮ್‌ ವಿರುದ್ಧ ನಿರ್ದೇಶಕ ನಾಗಶೇಖರ್, ನಟ ಶ್ರೀನಗರ ಕಿಟ್ಟಿ ವಾಣಿಜ್ಯ ಮಂಡಳಿಗೆ ದೂರು ನೀಡಿದ್ದಾರೆ. ನಾಗಶೇಖರ್‌ ನಿರ್ದೇಶನದ ಸಂಜು ವೆಡ್ಸ್ ಗೀತಾ 2 ಸಿನಿಮಾದಲ್ಲಿ ಶ್ರೀನಗರ ಕಿಟ್ಟಿಗೆ ಜೋಡಿಯಾಗಿ ನಟಿ ರಚಿತಾ ರಾಮ್‌ ನಟಿಸಿದ್ದರು. ಇದೀಗ ರಚಿತಾ ರಾಮ್‌ ಅವರಿಂದ ತಮಗೆ ಸಮಸ್ಯೆ ಆಗಿದೆ ಎಂದು ನಾಗಶೇಖರ್‌ ಫಿಲ್ಮ್‌ ಚೇಂಬರ್‌ ಮೆಟ್ಟಿಲೇರಿದ್ದಾರೆ.

Advertisement

ಸಂಜು ವೆಡ್ಸ್ ಗೀತಾ 2 ಸಿನಿಮಾ ಪ್ರಚಾರಕ್ಕೆ ರಚಿತಾ ರಾಮ್ ಬಂದಿಲ್ಲ ಎಂಬ ಕಾರಣಕ್ಕೆ ನಿರ್ದೇಶಕರು ರಚಿತಾ ರಾಮ್‌ ವಿರುದ್ಧ ತಿರುಗಿ ಬಿದ್ದಿದ್ದಾರೆ. ನಾನು ರಮ್ಯಾ, ತಮನ್ನಾ ಎಲ್ಲರಿಗೂ ಸಿನಿಮಾ ಮಾಡಿದ್ದೀನಿ. ಆದ್ರೆ ಇಂತಹ ಸಮಸ್ಯೆ ಯಾವ ನಟಿಯೂ ಕೊಟ್ಟಿಲ್ಲ ನಮ್ಮ ಸಿನಿಮಾ ಪ್ರಚಾರಕ್ಕೆ ಒಂಚೂರು ಸಪೋರ್ಟ್ ಕೊಟ್ಟಿಲ್ಲ. ರಾಕ್‌ಲೈನ್ ವೆಂಕಟೇಶ್ ಮನವೊಲಿಸಲು ಪ್ರಯತ್ನಿಸಿದ್ರು. ಆದರೂ ರಚಿತಾ ಒಪ್ಪಿಲ್ಲ. ನಾವು ಇಂತಹ ಕಲಾವಿದರಿಗೆ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದಿದ್ದಾರೆ.

ಶಿವಣ್ಣ, ಉಪೇಂದ್ರ, ಸುದೀಪ್ ಅಂತಹವರೇ ಈ ಸಿನಿಮಾವನ್ನು ಬೆಂಬಲಿಸಿದ್ದಾರೆ. ನಾವು ಪೇಮೆಂಟ್ ಕಮ್ಮಿ ಕೊಟ್ಟಿಲ್ಲ. ಹೀಗಾಗಿ ನಟಿ ರಚಿತಾ ರಾಮ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶಕ ನಾಗಶೇಖರ್ ಮತ್ತು ನಟ ಶ್ರೀನಗರ ಕಿಟ್ಟಿ ಫಿಲ್ಮ್ ಚೇಂಬರ್‌  ದೂರು ನೀಡಿದ್ದಾರೆ.


Spread the love

LEAVE A REPLY

Please enter your comment!
Please enter your name here