ಶಿವಮೊಗ್ಗ:- ಶೂಟಿಂಗ್ ವೇಳೆಯೇ ಹೃದಯಾಘಾತ ಸಂಭವಿಸಿ ನಿರ್ದೇಶಕ ಸಂಗೀತ್ ಸಾಗರ್ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದಲ್ಲಿ ಜರುಗಿದೆ.
Advertisement
ಎಸ್, ಹರಿಹರಪುರದಲ್ಲಿ ಸಿನಿಮಾ ಚಿತ್ರೀಕರಣ ನಡೆಯುತ್ತಿತ್ತು. ಈ ವೇಳೆ ಹೃದಯಾಘಾತದಿಂದ ಸಂಗೀತ್ ಸಾಗರ್ ಅವರು ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಕೊಪ್ಪ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ದುರದೃಷ್ಟವಶಾತ್ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಅವರು ಸಾವನ್ನಪ್ಪಿದ್ದಾರೆ.
ಪಾತ್ರಧಾರಿ’ ಸಿನಿಮಾದ ಚಿತ್ರೀಕರಣ ನಡೆಸುತ್ತಿದ್ದ ವೇಳೆ ಅವಘಡವಾಗಿದೆ. ಸಿನಿಮಾದ ನಿರ್ದೇಶಕ ಹಾಗೂ ಸಂಗೀತ ನಿರ್ದೇಶಕರಾಗಿ ಸಂಗೀತ್ ಸಾಗರ್ ಕೆಲಸ ಮಾಡುತ್ತಿದ್ದರು. ಎಂಟಕ್ಕೂ ಹೆಚ್ಚು ಕನ್ನಡ ಚಿತ್ರಗಳನ್ನು ಇವರು ನಿರ್ದೇಶಿಸಿದ್ದರು. ಇದೀಗ ಇವರ ನಿಧನಕ್ಕೆ ಸಿನಿಮಾ ರಂಗ ಕಂಬನಿ ಮಿಡಿದಿದೆ.


