ಕೊಳಕು ಹಿಂದೂಗಳು ನನ್ನ ಹಿಂದೆ ಬಿದ್ದಿದ್ದಾರೆ: ನಾಲಿಗೆ ಹರಿಬಿಟ್ಟ ಮಂಗಳೂರು ವೈದ್ಯೆ!

0
Spread the love

ಮಂಗಳೂರು:- ಪಹಲ್ಗಾಮ್ ದಾಳಿ ಬೆನ್ನಲ್ಲೇ ಒಂದೆಡೆ ದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಅಲ್ಲದೇ ಪಾಕ್ ಹಾಗೂ ಭಾರತದ ನಡುವೆ ಯುದ್ಧ ಯಾವಾಗ ಆಗುತ್ತೋ ಎಂಬ ಆತಂಕ ಮನೆ ಮಾಡಿದೆ. ಈ ಬೆನ್ನಲ್ಲೇ ಮಂಗಳೂರಿನ ಖಾಸಗಿ ಆಸ್ಪತ್ರೆ ವೈದ್ಯೆಯೊಬ್ಬಳು ಸಾಮಾಜಿಕ ಮಾಧ್ಯಮದಲ್ಲಿ ದೇಶ ಮತ್ತು ಧರ್ಮ ವಿರೋಧಿ ಪೋಸ್ಟ್ ಪ್ರಕಟಿಸಿದ್ದಾಳೆ. ಇದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

Advertisement

ಕಾಪಾಡಿ, ಕೊಳಕು ಹಿಂದೂಗಳು ನನ್ನ ಹಿಂದೆ ಬಿದ್ದಿದ್ದಾರೆ. ಹೌದು ನಾನು ಭಾರತೀಯಳು, ಹೌದು ನಾನು ಭಾರತವನ್ನು ದ್ವೇಷಿಸುತ್ತೇನೆ’ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಹೈಲ್ಯಾಂಡ್ ಆಸ್ಪತ್ರೆ ವೈದ್ಯೆ ಅಫೀಫ ಫಾತಿಮಾ ಎಂಬಾಕೆ ದೇಶ ವಿರೋಧಿ ಸಂದೇಶ ಪ್ರಕಟಿಸಿದ್ದಾರೆ. ಇದೀಗ ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿದೆ. ಅಲ್ಲದೇ ವೈದ್ಯೆ ವಿರುದ್ಧ ಮಂಗಳೂರು ನಗರದ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಿಸಲಾಗಿದೆ. ಹೈಲ್ಯಾಂಡ್ ಆಸ್ಪತ್ರೆ ಹೆಚ್​ಆರ್​ ಮೊಹಮ್ಮದ್ ಅಸ್ಲಾಂ ದೂರು ಆಧರಿಸಿ ಬಿಎನ್​ಎಸ್​​ ಕಲಂ 196(1)(a), 353(2) ಅಡಿಯಲ್ಲಿ ಎಫ್​ಐಆರ್ ದಾಖಲಿಸಲಾಗಿದೆ.

ಜಮ್ಮು ಕಾಶ್ಮೀರದ ಪಹಲ್ಗಾಮ್ ದಾಳಿ ನಂತರ ಭಾರತ ಹಾಗೂ ಪಾಕಿಸ್ತಾನ ಮಧ್ಯೆ ಉದ್ವಿಗ್ನ ಪರಿಸ್ಥಿತಿ ಇರುವ ಸಂದರ್ಭದಲ್ಲಿಯೇ ವೈದ್ಯೆ ಈ ರೀತಿ ಪೋಸ್ಟ್ ಮಾಡಿರುವುದಕ್ಕೆ ಹಿಂದೂ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ.


Spread the love

LEAVE A REPLY

Please enter your comment!
Please enter your name here