ಬೆಂಗಳೂರು: ಬೆಂಗಳೂರಿನ ಸೆಷನ್ಸ್ ಕೋರ್ಟ್ ಸಿಸಿಹೆಚ್ 57ರಲ್ಲಿ ದರ್ಶನ್, ಪವಿತ್ರಾಗೌಡ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಸಿದೆ. ನಟ ದರ್ಶನ್ ಅವರು ಸಿಗುವ ನಿರೀಕ್ಷೆಯಲ್ಲಿ ಇದ್ದರು. ಆದರೆ, ಜಾಮೀನು ಅರ್ಜಿ ವಿಚಾರಣೆಯನ್ನು ಮುಂದಕ್ಕೆ ಹಾಕಲಾಗಿದೆ. ಅಕ್ಟೋಬರ್ 4ರಂದು ಜಾಮೀನು ಅರ್ಜಿಯ ವಿಚಾರಣೆ ನಡೆಯಲಿದೆ.
ವಾದ ಮಂಡನೆಗೆ ಕಾಲಾವಕಾಶ ಬೇಕು ಎಂದು ದರ್ಶನ್ ಪರ ವಕೀಲರು ಮನವಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ 57ನೇ ಸಿಟಿ ಸಿವಿಲ್ ಕೋರ್ಟ್ ಅರ್ಜಿ ವಿಚಾರಣೆಯನ್ನು ಮುಂದೂಡಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಅಂತ್ಯವಾಗಿದೆ. ಚಾರ್ಜ್ಶೀಟ್ ಸಲ್ಲಿಕೆ ಆದ ಬಳಿಕ ಜಾಮೀನಿಗಾಗಿ ಅರ್ಜಿ ಸಲ್ಲಿಸಲಾಯಿತು. ಕೇಸ್ಗೆ ಸಂಬಂಧಿಸಿದಂತೆ ಕೆಲವು ಅನುಮಾನಗಳು ಇದ್ದಿದ್ದರಿಂದ ದರ್ಶನ್ ಪರ ವಕೀಲರು ಬಳ್ಳಾರಿ ಜೈಲಿಗೆ ಭೇಟಿ ನೀಡಿ ಮಾತುಕಥೆ ನಡೆಸಿ ಬಂದಿದ್ದರು. ಈಗ ವಾದಮಂಡನೆಗೆ ಕಾಲಾವಕಾಶ ಬೇಕು ಎಂದು ದರ್ಶನ್ ಪರ ವಕೀಲ ಸುನೀಲ್ ಅವರು ಕೋರಿದ್ದಾರೆ.


