ಬೆಂಗಳೂರು: ಕಾಂಗ್ರೆಸ್ ಪಕ್ಷದ ಯಾವುದೇ ಶಾಸಕರು ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರಶ್ನೆ ಮಾಡಬಾರದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಐದು ಗ್ಯಾರಂಟಿ ಯೋಜನೆಗಳಲ್ಲಿ ಎರಡನ್ನು ಕೈಬಿಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡುತ್ತೇವೆ ಎಂದು ಹೇಳಿದ್ದರು. ಇನ್ನೂ ವಿಚಾರವಾಗಿ ನಗರದಲ್ಲಿ ಮಾತನಾಡಿದ ಡಿಕೆಶಿ,
ಕಾಂಗ್ರೆಸ್ ಪಕ್ಷದ ಯಾವುದೇ ಶಾಸಕರು ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರಶ್ನೆ ಮಾಡಬಾರದು. ಪ್ರಶ್ನೆ ಮಾಡಿದರೆ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಹೇಳಿದರು.ಇನ್ನೂ ಗವಿಯಪ್ಪ ಹಾಗೆ ಹೇಳಿದ್ದಾರೆ ಅಂತ ನಾನು ಅಂದುಕೊಳ್ಳಲ್ಲ. ನಮ್ಮ ಪಕ್ಷ ಈಗಾಗಲೇ ಬಜೆಟ್ ಘೋಷಣೆ ಮಾಡಿದೆ. ಅದರ ಅಡಿಯಲ್ಲಿ ಅನುದಾನ ಹಂಚಿಕೆ ಆಗುತ್ತದೆ. ಗ್ಯಾರಂಟಿ ನಿಲ್ಲಿಸುವಂತೆ ಹೇಳಿದ್ದಾರೆ ಎಂದು ನಾನು ಒಪ್ಪಲ್ಲ.
ಎಲ್ಲಾ ಶಾಸಕರಿಗೂ ಅನುದಾನವನ್ನ ನೀಡಿದ್ದೇವೆ. ಗವಿಯಪ್ಪಗೆ ಸರಿಯಾದ ಮಾಹಿತಿ ಇಲ್ಲ ಅನ್ಸುತ್ತೆ. ಅಭಿವೃದ್ಧಿಗೆ ಅನುದಾನ ನೀಡುತ್ತಿದ್ದೇವೆ. ಗವಿಯಪ್ಪ ಜೊತೆಗೆ ನಾನು ಮಾತನ್ನಾಡುತ್ತೇನೆ. ಅವರಿಂದ ಸ್ಪಷ್ಟನೆ ಕೇಳುತ್ತೇನೆ. ಬೇರೆ ಯಾವುದೇ ಶಾಸಕರು ಬಹಿರಂಗವಾಗಿ ಹೇಳಿಕೆ ನೀಡಿದ್ರೆ ಶಿಸ್ತು ಕ್ರಮ ಎಂದು ಎಚ್ಚರಿಕೆ ನೀಡಿದ್ದಾರೆ..