ಗದಗ ನಗರದ ಪಂ. ಶ್ರೀ ಪಂಚಾಕ್ಷರಿ ಗವಾಯಿಗಳ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ದಲಾಲ ವರ್ತಕರ ಸಂಘ, ಖರೀದಿದಾರರ ಸಂಘದ ಶ್ರೀ ಗಜಾನನೋತ್ಸವ ಟ್ರಸ್ಟ್ ಕಮಿಟಿ ವತಿಯಿಂದ ಗಣೇಶನ ಮೂರ್ತಿಯ ವಿಸರ್ಜನಾ ಮೆರವಣಿಗೆ ಅದ್ದೂರಿಯಾಗಿ ಜರುಗಿತು. ಜಿಲ್ಲೆಯ ವಿವಿಧ ತಾಲೂಕುಗಳಿಂದ ಬಂದ ಯುವಕರು ಮೆರವಣಿಗೆಯಲ್ಲಿ ಡಿಜೆ ಹಾಡಿಗೆ ಹೆಜ್ಜೆ ಹಾಕಿ ಕುಣಿದು ಕುಪ್ಪಳಿಸಿದರು. ಈ ಮೆರವಣಿಗೆಯಲ್ಲಿ ಶ್ರೀ ಗಜಾನನೋತ್ಸವ ಟ್ರಸ್ಟ್ ಕಮಿಟಿಯ ಅಧ್ಯಕ್ಷರು, ಉಪಾಧ್ಯಕ್ಷರು, ಗೌರವ ಅಧ್ಯಕ್ಷರು ಮತ್ತು ಕಮಿಟಿಯ ಪದಾಧಿಕಾರಿಗಳು ಇದ್ದರು.
Spread the love