HomeKarnataka Newsಅಕ್ರಮ ಸಂಬಂಧಕ್ಕೆ ಅಡ್ಡಿ: ಪತಿ, ಅತ್ತೆ-ಮಾವ, ಮಕ್ಕಳಿಗೆ ಚಟ್ಟಕಟ್ಟಲು ಯತ್ನಿಸಿದ ಖತರ್ನಾಕ್ ಲೇಡಿ ಅರೆಸ್ಟ್!

ಅಕ್ರಮ ಸಂಬಂಧಕ್ಕೆ ಅಡ್ಡಿ: ಪತಿ, ಅತ್ತೆ-ಮಾವ, ಮಕ್ಕಳಿಗೆ ಚಟ್ಟಕಟ್ಟಲು ಯತ್ನಿಸಿದ ಖತರ್ನಾಕ್ ಲೇಡಿ ಅರೆಸ್ಟ್!

For Dai;y Updates Join Our whatsapp Group

Spread the love

ಹಾಸನ:- ಪರ ಪುರುಷನೊಂದಿಗೆ ಸರಸಕ್ಕೆ ಅಡ್ಡಿ ಹಿನ್ನೆಲೆ ಅನ್ನಕ್ಕೆ ವಿಷ ಹಾಕಿ ಇಡೀ ಕುಟುಂಬವನ್ನೇ ಮುಗಿಸಲು ಖತರ್ನಾಕ್ ಮಹಿಳೆ ಯತ್ನಿಸಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಕೆರಳೂರು ಗ್ರಾಮದಲ್ಲಿ ಜರುಗಿದೆ. ಘಟನೆಗೆ ಸಂಬಂಧಿಸಿದಂತೆ ಇದೀಗ ಈ ಲೇಡಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಚೈತ್ರಾ (33) ಬಂಧಿತ ಮಹಿಳೆ.

ಈಕೆ ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ತನ್ನ ಪತಿ, ಮಕ್ಕಳು ಹಾಗೂ ಅತ್ತೆ-ಮಾವನಿಗೆ ವಿಷ ಹಾಕಿ ಕೊಲೆಗೆ ಯತ್ನಿಸಿದ್ದಳು. ಆದ್ರೆ ಈಕೆ ಪ್ಲ್ಯಾನ್ ಠುಸ್ ಆಗಿದ್ದು, ತಾನೇ ಜೈಲು ಪಾಲಾಗುವಂತೆ ಆಗಿದೆ.

ಘಟನೆ ವಿವರ:

ಗಜೇಂದ್ರ ಎಂಬವರೊಂದಿಗೆ 11 ವರ್ಷಗಳ ಹಿಂದೆ ಚೈತ್ರಾ ವಿವಾಹವಾಗಿದ್ದಳು. ಕೆಲ ವರ್ಷಗಳ ಕಾಲ ಎಲ್ಲವೂ ಚೆನ್ನಾಗಿಯೇ ಇತ್ತು. ದಂಪತಿಗೆ ಇಬ್ಬರು ಗಂಡು ಮಕ್ಕಳೂ ಇದ್ದಾರೆ. ಆದ್ರೆ ಕಳೆದ ಮೂರು ವರ್ಷಗಳಿಂದ ಸಣ್ಣ-ಪುಟ್ಟ ವಿಚಾರಕ್ಕೂ ಚೈತ್ರಾ ಗಂಡನೊಂದಿಗೆ ಜಗಳವಾಡುತ್ತಿದ್ದಳು. ಈ ನಡುವೆಯೇ ಚೈತ್ರಾಳಿಗೆ ಪುನೀತ್‌ ಎಂಬಾತ ಪರಿಚಯವಾಗಿದ್ದ. ಇಬ್ಬರಿಗೂ ಸಲುಗೆ ಬೆಳೆದಿತ್ತು. ಹೀಗಾಗಿ ಪುನೀತ್‌ ಜೊತೆಗೆ ಚೈತ್ರಾ ಅನೈತಿಕ ಸಂಬಂಧ ಹೊಂದಿದ್ದಳು.

ಚೈತ್ರ-ಪುನೀತ್ ನಡುವಿನ ಅಕ್ರಮ ಸಂಬಂಧದ ಬಗ್ಗೆ ತಿಳಿದ ಪತಿ ಗಜೇಂದ್ರ ಈ ವಿಚಾರವನ್ನ ಚೈತ್ರಾಳ ತಂದೆ-ತಾಯಿಗೆ ತಿಳಿಸಿದ್ದ. ಕೊನೆಗೆ ಕುಟುಂಬಸ್ಥರು ರಾಜಿ ಪಂಚಾಯ್ತಿ ಮಾಡಿದ್ದರು. ಬಳಿಕ ದಂಪತಿ ಅನ್ಯೋನ್ಯವಾಗಿದ್ದರು. ಪುನಃ ಕೆಲ ದಿನಗಳಿಂದ ಅದೇ ಗ್ರಾಮದ ಶಿವು ಎಂಬಾತನೊಂದಿಗೆ ಚೈತ್ರಾ ಅನೈತಿಕ ಸಂಬಂಧ ಹೊಂದಿದ್ದಳು. ಈ ವಿಷಯ ಕುಟುಂಬಸ್ಥರಿಗೆ ತಿಳಿಯುವ ಮುನ್ನ ಹಾಗೂ ತನ್ನ ಅಕ್ರಮ ಸಂಬಂಧಕ್ಕೆ ಗಂಡ, ಮಕ್ಕಳು, ಅತ್ತೆ-ಮಾವ ಅಡ್ಡಿಯಾಗುತ್ತಾರೆ ಎಂಬ ಅನುಮಾನದಿಂದ ಎಲ್ಲರನ್ನೂ ಸಾಮೂಹಿಕವಾಗಿ ಮುಗಿಸುವ ಸ್ಕೆಚ್‌ ಹಾಕಿದಳು.

ಪತಿ ಹಾಗೂ ಅವರ ಕುಟುಂಬದವರಿಗೆ ತಿಳಿಯದಂತೆ ಊಟ-ತಿಂಡಿಯಲ್ಲಿ ವಿಷಯುಕ್ತ ಮಾತ್ರೆಗಳನ್ನು ಹಾಕುತ್ತಿದ್ದಳು. ಇದಕ್ಕೆ ಪ್ರಿಯತಮ ಶಿವು ಕೂಡ ಸಹಕಾರ ನೀಡಿದ್ದ. ಈ ವಿಷಯ ತಿಳಿದು ಪತಿ ಗಜೇಂದ್ರ ಪೊಲೀಸರಿಗೆ ದೂರು ನೀಡಿದ್ದಾರೆ. ವಿಚಾರಣೆ ಬಳಿಕ ಪೊಲೀಸರು ಇದೀಗ ಚೈತ್ರಾಳನ್ನು ಬಂಧಿಸಿದ್ದು, ತನಿಖೆ ಕೈಗೊಂಡಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!