ಮಂಗಳೂರು ವಿಮಾನ ನಿಲ್ದಾಣದಿಂದ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ!

0
Spread the love

ಮಂಗಳೂರು:- ಮಂಗಳೂರು ವಿಮಾನ ನಿಲ್ದಾಣದಿಂದ ವಿಮಾನಗಳ ಸಂಚಾರದಲ್ಲಿ ವ್ಯತ್ಯಯವಾಗಿದೆ. ಕೊಲ್ಲಿ ರಾಷ್ಟ್ರ ಕತಾರ್​ನಲ್ಲಿರುವ ಅಮೇರಿಕಾ ಸೇನಾ ನೆಲೆಗಳ ಮೇಲೆ ಇರಾನ್ ಮಿಸೈಲ್ ದಾಳಿ ನಡೆಸಿರುವ ಕಾರಣ ವಿಮಾನಗಳ ಸಂಚಾರದಲ್ಲಿ ವ್ಯತ್ಯಯವಾಗಿದೆ.

Advertisement

ಮಂಗಳೂರಿನಿಂದ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ದಮ್ಮಾಮ್‌ಗೆ ಹೋಗುವ ಬದಲು ಮುಸ್ಕತ್‌ ಕಡೆ ತಿರುಗಿಸಲಾಗಿತ್ತು. ಅಬುದಾಭಿಗೆ ಹೋಗುವ ಇಂಡಿಗೋ ವಿಮಾನ ಮುಂಬೈನಲ್ಲಿ ಲ್ಯಾಂಡ್ ಆಗಿತ್ತು. ಇದೀಗ ಎರಡೂ ವಿಮಾನಗಳು ಮಂಗಳೂರಿಗೆ ವಾಪಸ್ ಆಗಿವೆ.

ಇರಾನ್ ಮಿಸೈಲ್ ದಾಳಿ ಮಾಡಿದ ಕಾರಣ ಮಧ್ಯಪ್ರಾಚ್ಯದ ದೇಶಗಳು ವಾಯುಮಾರ್ಗಗಳನ್ನು ಬಂದ್ ಮಾಡಿವೆ. ಅಲ್ಲಿನ ವಿಮಾನಯಾನ ವಲಯ ಮುಚ್ಚಲ್ಪಟ್ಟ ಕಾರಣ ವಿಮಾನಗಳು ಮಂಗಳೂರಿಗೆ ವಾಪಸಾಗಿವೆ. ಮಂಗಳೂರಿನಿಂದ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟದಲ್ಲಿ ವ್ಯತ್ಯಯವಾಗಿರುವ ಬಗ್ಗೆ ಏರ್​ಪೋರ್ಟ್ ಆಡಳಿತ ಮಾಹಿತಿ ನೀಡಿದೆ.


Spread the love

LEAVE A REPLY

Please enter your comment!
Please enter your name here