ಬೆಂಗಳೂರು: ನಗರದ ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ಮೇ 17ರ ಭಾನುವಾರ ಅತ್ಯಗತ್ಯ ತಾಂತ್ರಿಕ ಕಾಮಗಾರಿ ನಡೆಯಲಿರುವ ಹಿನ್ನೆಲೆಯಲ್ಲಿ ಬೆಳಿಗ್ಗೆ 7ರಿಂದ 9 ಗಂಟೆಯವರೆಗೆ ಮೆಟ್ರೋ ಸಂಚಾರದಲ್ಲಿ ಭಾಗಶಃ ವ್ಯತ್ಯಯ ಉಂಟಾಗಲಿದೆ ಎಂದು BMRCL ತಿಳಿಸಿದೆ.
ನಾಡಪ್ರಭು ಕೆಂಪೇಗೌಡ ನಿಲ್ದಾಣ ಮತ್ತು ಸರ್ ಎಂ. ವಿಶ್ವೇಶ್ವರಯ್ಯ ನಿಲ್ದಾಣಗಳ ನಡುವೆ ಸುರಕ್ಷತಾ ಕಾಮಗಾರಿ ನಡೆಯಲಿದ್ದು, ಈ ಕಾರಣದಿಂದ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ನಿಲ್ದಾಣದಿಂದ ಕಬ್ಬನ್ ಪಾರ್ಕ್ ನಿಲ್ದಾಣದವರೆಗೆ ರೈಲು ಸೇವೆ ಸಂಪೂರ್ಣ ಸ್ಥಗಿತಗೊಳ್ಳಲಿದೆ.
ಬೆಳಿಗ್ಗೆ 9 ಗಂಟೆಯ ನಂತರ ರೈಲು ಸಂಚಾರ ಎಂದಿನಂತೆ ಪುನರಾರಂಭವಾಗಲಿದೆ.
ಚಲ್ಲಘಟ್ಟದಿಂದ ವಿಜಯನಗರದವರೆಗೆ ಹಾಗೂ ಮಹಾತ್ಮ ಗಾಂಧಿ ರಸ್ತೆ ನಿಲ್ದಾಣದಿಂದ ಕಾಡುಗೋಡಿ ನಿಲ್ದಾಣದವರೆಗೆ ರೈಲುಗಳು ಎಂದಿನಂತೆ ಸಂಚರಿಸಲಿವೆ. ಹಸಿರು ಮಾರ್ಗ ಮತ್ತು ಹಳದಿ ಮಾರ್ಗದ ಸೇವೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.
ಭಾನುವಾರ ಬೆಳಿಗ್ಗೆ ಮೆಜೆಸ್ಟಿಕ್ ಹಾಗೂ ಕಬ್ಬನ್ ಪಾರ್ಕ್ ಕಡೆ ಪ್ರಯಾಣಿಸುವವರು ಮುಂಚಿತವಾಗಿ ತಮ್ಮ ಪ್ರಯಾಣ ಯೋಜಿಸಿಕೊಳ್ಳುವಂತೆ ಮನವಿ ಮಾಡಲಾಗಿದೆ.



