HomeKarnataka Newsದಸರಾ ಆರಂಭದಲ್ಲೇ ಅಸಮಾಧಾನ: ಯತೀಂದ್ರ ಆಗಮನ ವಿಳಂಬಕ್ಕೆ ಸಿಟ್ಟಾಗಿ ಹೊರನಡೆದ ತನ್ವೀರ್ ಸೇಠ್

ದಸರಾ ಆರಂಭದಲ್ಲೇ ಅಸಮಾಧಾನ: ಯತೀಂದ್ರ ಆಗಮನ ವಿಳಂಬಕ್ಕೆ ಸಿಟ್ಟಾಗಿ ಹೊರನಡೆದ ತನ್ವೀರ್ ಸೇಠ್

For Dai;y Updates Join Our whatsapp Group

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಸಿದ್ಧತೆಗಳ ನಡುವೆಯೇ ಮಾವುತರು ಹಾಗೂ ಕಾವಾಡಿಗರ ಕುಟುಂಬಗಳಿಗೆ ಆಯೋಜಿಸಿದ್ದ ಉಪಾಹಾರ ಕೂಟ ವಿಳಂಬವಾಗಿದ್ದಕ್ಕೆ ಹಿರಿಯ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಅಸಮಾಧಾನ ವ್ಯಕ್ತಪಡಿಸಿ ಕಾರ್ಯಕ್ರಮದ ಸ್ಥಳದಿಂದ ಹೊರನಡೆದ ಘಟನೆ ನಡೆದಿದೆ.

ಅಂಬಾವಿಲಾಸ ಅರಮನೆ ಆವರಣದಲ್ಲಿ ಭಾನುವಾರ ಬೆಳಗ್ಗೆ 9 ಗಂಟೆಗೆ ದಸರಾ ಗಜಪಡೆಯ ಮಾವುತರು ಮತ್ತು ಕಾವಾಡಿಗರ ಕುಟುಂಬಗಳಿಗೆ ಜಿಲ್ಲಾಡಳಿತದಿಂದ ಉಪಾಹಾರ ಕೂಟ ಹಾಗೂ ಕಿಟ್ ವಿತರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಆದರೆ ನಿಗದಿತ ಸಮಯಕ್ಕೆ ಕಾರ್ಯಕ್ರಮ ಆರಂಭವಾಗದ ಕಾರಣ ತನ್ವೀರ್ ಸೇಠ್ ಅಧಿಕಾರಿಗಳ ವಿರುದ್ಧ ಬೇಸರ ವ್ಯಕ್ತಪಡಿಸಿದರು.

‘ಮಾವುತರನ್ನು ಹೀಗೆ ಕಾಯಿಸುವುದಾ?’

ಉಪಾಹಾರಕ್ಕಾಗಿ ಮಾವುತರು ಹಾಗೂ ಕಾವಾಡಿಗರನ್ನು ಕೂರಿಸಿ, ಬಾಳೆ ಎಲೆಗಳನ್ನು ಹಾಕಲಾಗಿತ್ತು. ಆದರೆ ಕಾರ್ಯಕ್ರಮ ಆರಂಭವಾಗದ ಹಿನ್ನೆಲೆಯಲ್ಲಿ ಅವರು ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು.

ಇದರಿಂದ ಅಸಮಾಧಾನಗೊಂಡ ತನ್ವೀರ್ ಸೇಠ್, “ಸಮಯ ಪ್ರಜ್ಞೆ ಇರಬೇಕು. ಬೇರೆ ಕಾರ್ಯಕ್ರಮವಾಗಿದ್ದರೆ ಹೇಗೋ ಸರಿ, ಆದರೆ ಇಂತಹ ಕಾರ್ಯಕ್ರಮಕ್ಕೆ ತಡವಾದರೆ ಅದರ ಅರ್ಥವೇನು? ಎಲ್ಲದಕ್ಕೂ ಒಂದು ಮಿತಿ ಇದೆ. ಮಾವುತರನ್ನು ಹೀಗೆ ಕಾಯಿಸುವುದು ಸರಿಯಲ್ಲ” ಎಂದು ಅಧಿಕಾರಿಗಳ ಮುಂದೆ ಅಸಮಾಧಾನ ಹೊರಹಾಕಿದರು.

ಬೆಳಗ್ಗಿನಿಂದ ಕಾಯುತ್ತಿದ್ದ ಮಾವುತರಿಗೆ ಗೌರವ ನೀಡಬೇಕು ಹಾಗೂ ಸಮಯಕ್ಕೆ ಸರಿಯಾಗಿ ಉಪಾಹಾರ ನೀಡಬೇಕು ಎಂದು ಹೇಳಿದ ತನ್ವೀರ್ ಸೇಠ್, ಕಾರ್ಯಕ್ರಮವನ್ನು ಕೂಡಲೇ ಆರಂಭಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದರು. ಆದರೂ ವಿಳಂಬ ಮುಂದುವರಿದ ಹಿನ್ನೆಲೆಯಲ್ಲಿ ಅವರು ಸ್ಥಳದಿಂದ ನಿರ್ಗಮಿಸಿದರು ಎಂದು ವರದಿಯಾಗಿದೆ.

ಯತೀಂದ್ರ ಸಿದ್ದರಾಮಯ್ಯ ಆಗಮನ ವಿಳಂಬ

ಮೈಸೂರು ಜಿಲ್ಲಾ ಉಸ್ತುವಾರಿ ಹಾಗೂ ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಯತೀಂದ್ರ ಸಿದ್ದರಾಮಯ್ಯ ಅವರು ನಿಗದಿತ ಸಮಯಕ್ಕಿಂತ ತಡವಾಗಿ ಕಾರ್ಯಕ್ರಮಕ್ಕೆ ಆಗಮಿಸಿದ್ದು, ಬಳಿಕ ಮಾವುತರು ಮತ್ತು ಕಾವಾಡಿಗರಿಗೆ ಉಪಾಹಾರ ಬಡಿಸುವ ಕಾರ್ಯಕ್ರಮ ನಡೆಯಿತು.

ಮೈಸೂರು ದಸರಾ 2026ರ ಪ್ರಮುಖ ಕಾರ್ಯಕ್ರಮಗಳು ಅಕ್ಟೋಬರ್ 11ರಿಂದ 21ರವರೆಗೆ ನಡೆಯಲಿದ್ದು, ಜಂಬೂಸವಾರಿ ಅಕ್ಟೋಬರ್ 21ರಂದು ನಡೆಯಲಿದೆ ಎಂದು ಅಧಿಕೃತ ವೇಳಾಪಟ್ಟಿ ತಿಳಿಸಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img