ಮುಂದಿನ ವರ್ಷದಿಂದಲೇ ಶಾಲಾ ಮಕ್ಕಳಿಗೆ ಸೈಕಲ್ ವಿತರಣೆ: ಮಧು ಬಂಗಾರಪ್ಪ

0
Spread the love

ಬೆಂಗಳೂರು:  ವಿಧಾನ ಪರಿಷತ್ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ರವಿಕುಮಾರ್ ಪ್ರಶ್ನೆಗೆ  ಮುಂದಿನ ವರ್ಷದಿಂದಲೇ ಶಾಲಾ ಮಕ್ಕಳಿಗೆ ಸೈಕಲ್ ವಿತರಣೆ ಮಾಡಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದ್ದಾರೆ.

Advertisement

ಶಾಲಾ ಮಕ್ಕಳಿಗೆ ಯಾಕೆ ಸೈಕಲ್ ಕೊಡ್ತಿಲ್ಲ? ಬಿಜೆಪಿ‌ ಸರ್ಕಾರ ಸೈಕಲ್ ನಿಲ್ಲಿಸಿತ್ತು ಒಪ್ಪುತ್ತೇನೆ? ಅದಕ್ಕೆ ಜನ ನಮ್ಮನ್ನ ಇಲ್ಲಿಗೆ ಕೂರಿಸಿದ್ದಾರೆ. ಆದ್ರೆ ಈ ಸರ್ಕಾರಕ್ಕೆ ಸೈಕಲ್ ಕೊಡಲು ಹಣದ ಕೊರತೆ ಇದೆಯಾ? ಎಂದು ಪ್ರಶ್ನೆ ಮಾಡಿದರು. ಮಕ್ಕಳಿಗೆ ಶೂ, ಸಾಕ್ಸ್, ಸಮವಸ್ತ್ರಕ್ಕೆ 100 ರೂ. ಕೊಡ್ತಿದ್ದಾರೆ. ಖರ್ಚೀಫ್ ಗೆ ಕೊಡುವಷ್ಟು ಹಣ ಕೊಡ್ತಿದ್ದಾರೆ. ಇಷ್ಟು ಹಣ ಶೂ, ಸಾಕ್ಸ್, ಸಮವಸ್ತ್ರಕ್ಕೆ ಸಾಕಾಗುತ್ತದೆಯೇ? ಶೂ, ಸಾಕ್ಸ್ ಹಣ ಹೆಚ್ಚಳ ಮಾಡಬೇಕು ಅಂತ ಒತ್ತಾಯ ಮಾಡಿದರು.

ಇದಕ್ಕೆ ಉತ್ತರಿಸಿದ ಸಚಿವ ಮಧು ಬಂಗಾರಪ್ಪ, 2023-24ನೇ ಸಾಲಿನಲ್ಲಿ 55,43,828 ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ನೀಡಲಾಗಿದೆ. 45,45,749 ವಿದ್ಯಾರ್ಥಿಗಳಿಗೆ ಸಮವಸ್ತ್ರ, ಶೂ, ಸಾಕ್ಸ್ ವಿತರಿಸಲಾಗಿದೆ. ವಿದ್ಯಾರ್ಥಿಗಳಿಗೆ ಸೈಕಲ್ ಹಿಂದಿನ ಸರ್ಕಾರ ಕೊಡೋದು ನಿಲ್ಲಿಸಿದೆ. ನಾನು ಈಗಾಗಲೇ ಸಿಎಂ ಜೊತೆಗೆ ಮಾತಾಡಿದ್ದೇನೆ. ಮುಂದಿನ ವರ್ಷದಿಂದಲೇ 8ನೇ ತರಗತಿ ಮಕ್ಕಳಿಗೆ ಸೈಕಲ್ ಕೊಡುವ ವ್ಯವಸ್ಥೆ ಮಾಡುತ್ತೇವೆ ಎಂದು ಭರವಸೆ ಕೊಟ್ಟರು.


Spread the love

LEAVE A REPLY

Please enter your comment!
Please enter your name here