ಇನ್ಮುಂದೆ 5 ಕೆಜಿ ಅಕ್ಕಿ ಬದಲು ಇಂದಿರಾ ಆಹಾರ ಕಿಟ್ ವಿತರಣೆ: ಸಂಪುಟ ಸಭೆ ತೀರ್ಮಾನ

0
Spread the love

ಬೆಂಗಳೂರು: ಉಚಿತ ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಕಾರ್ಡ್ ಪಡೆದ ಫಲಾನುಭವಿಗಳಿಗೆ ಪೌಷ್ಟಿಕ ಆಹಾರ ವಿತರಣೆ ಮಾಡಲು ಕರ್ನಾಟಕ ಸರ್ಕಾರ ಹೊಸ ನಿರ್ಧಾರ ತೆಗೆದುಕೊಂಡಿದೆ. ಇಂದು ವಿಧಾನಸೌಧದಲ್ಲಿ ನಡೆದ ಸಂಪುಟ ಸಭೆಯಲ್ಲಿ, ಇಂದಿರಾ ಕಿಟ್ ಮೂಲಕ ಆಹಾರ ಧಾನ್ಯಗಳನ್ನು ವಿತರಿಸುವುದಕ್ಕೆ ಅನುಮೋದನೆ ಸಿಕ್ಕಿದೆ.

Advertisement

ರಾಜ್ಯ ಸರ್ಕಾರದಿಂದ 5 ಕೆಜಿ ಅಕ್ಕಿ ಬದಲು ಪೌಷ್ಟಿಕ ಧಾನ್ಯಗಳನ್ನು ಒದಗಿಸಲಾಗುವುದು. ಇದಕ್ಕೆ ಕೇಂದ್ರ ಸರ್ಕಾರ ನೀಡುವ 5 ಕೆಜಿ ಅಕ್ಕಿಯ ಜೊತೆಗೆ ರಾಜ್ಯ ಸರ್ಕಾರದ ಹೆಚ್ಚುವರಿ 5 ಕೆಜಿ ಅಕ್ಕಿಯನ್ನು ಸೇರಿಸಿ ಒಟ್ಟು 10 ಕೆಜಿ ಅಕ್ಕಿಯನ್ನು ಉಚಿತವಾಗಿ ಫಲಾನುಭವಿಗಳಿಗೆ ನೀಡಲಾಗುತ್ತದೆ.

ಹಿಂದೆ ಅಕ್ಕಿಯ ಕೊರತೆಯ ಕಾರಣದಿಂದ ಫಲಾನುಭವಿಗಳ ಖಾತೆಗೆ 175 ರೂ. ಜಮಾ ಮಾಡಲಾಗುತ್ತಿತ್ತು. ಅಕ್ಕಿಯ ದರ ಇಳಿಕೆ ಆದ ಬಳಿಕ ಕಳೆದ ಕೆಲ ತಿಂಗಳಿನಿಂದ ಮತ್ತೆ ಹಣದ ಬದಲಾಗಿ ಉಚಿತ ಅಕ್ಕಿ ನೀಡಲಾಗುತ್ತಿದೆ. ಇದೀಗ ಅನ್ನ ಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಇಂದಿರಾ ಕಿಟ್​ನಲ್ಲಿ ಪೌಷ್ಟಿಕ ಆಹಾರ ವಿತರಣೆಗೆ ಸಂಪುಟ ಸಭೆಯಲ್ಲಿ ಅನುಮೋದನೆ ಸಿಕ್ಕಿದೆ.

ರಾಜ್ಯ ಸರ್ಕಾರದಿಂದ 5 ಕೆಜಿ ಅಕ್ಕಿ ಬದಲು ಆಹಾರ ಧಾನ್ಯಗಳ ವಿತರಣೆ ಮುಂದಾಗಿದೆ. ಇಂದಿರಾ ಆಹಾರ ಕಿಟ್​ನಲ್ಲಿ ತೊಗರಿಬೆಳೆ, ಅಡುಗೆ ಎಣ್ಣೆ, ಉಪ್ಪು ಮತ್ತು ಸಕ್ಕರೆ ವಿತರಿಸಲು ನಿರ್ಧರಿಸಲಾಗಿದೆ. ಅನ್ನಭಾಗ್ಯ ಯೋಜನೆ ಅಕ್ಕಿ ಕಳ್ಳ ಸಾಗಾಟವಾಗುತ್ತಿದ್ದ ಹಿನ್ನೆಲೆ ಅದಕ್ಕೆ ಕಡಿವಾಣ ಹಾಕಲು ಸರ್ಕಾರ ಈ ನಿರ್ಧಾರ ಕೈಗೊಂಡಿದೆ.


Spread the love

LEAVE A REPLY

Please enter your comment!
Please enter your name here