HomeGadag Newsತಾಂತ್ರಿಕತೆಯ ಸದುಪಯೋಗ ಪಡೆದುಕೊಳ್ಳಿ : ಡಾ. ಚಂದ್ರು ಲಮಾಣಿ

ತಾಂತ್ರಿಕತೆಯ ಸದುಪಯೋಗ ಪಡೆದುಕೊಳ್ಳಿ : ಡಾ. ಚಂದ್ರು ಲಮಾಣಿ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಇಂದು ಪ್ರತಿಯೊಂದು ಕ್ಷೇತ್ರದಲ್ಲಿ ಕಂಪ್ಯೂಟರ್ ಕಾಲಿಟ್ಟಿದ್ದು, ತಾಂತ್ರಿಕತೆ ಬೆಳೆದಂತೆ ಅದರ ಜೊತೆ ನಾವೂ ಬೆಳೆಯಬೇಕಾದ ಅವಶ್ಯಕ ಇದೆ. ಈ ನಿಟ್ಟಿನಲ್ಲಿ ರಾಜ್ಯ ಸರಕಾರ ನೋಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ ನೀಡುವ ಉದ್ದೇಶದಿಂದ ಉಚಿತ ಲ್ಯಾಪ್‌ಟಾಪ್‌ಗಳನ್ನು ವಿತರಿಸಲಾಗುತ್ತಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.

ಅವರು ಪಟ್ಟಣದ ತಾ.ಪಂ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಜನಸ್ಪಂದನ ಸಭೆಯಲ್ಲಿ ಕಾರ್ಮಿಕ ಇಲಾಖೆಯಿಂದ ಸುಮಾರು 20 ಮಕ್ಕಳಿಗೆ ಸರಕಾರದಿಂದ ನೀಡಲಾದ ಲ್ಯಾಪ್‌ಟಾಪ್‌ಗಳನ್ನು ವಿತರಿಸಿ ಮಾತನಾಡಿದರು.

ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ಮಾತನಾಡಿ, ಸರಕಾರಗಳು ವಿದ್ಯಾರ್ಥಿಗಳ ಶಿಕ್ಷಣದ ಪ್ರಗತಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಅದರಲ್ಲಿ ಲ್ಯಾಪ್‌ಟಾಪ್ ವಿತರಣೆಯೂ ಒಂದಾಗಿದೆ. ಇವುಗಳನ್ನು ಪಡೆದ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಉತ್ತಮ ಸಾಧನೆ ಮಾಡುವ ಪ್ರಗತಿಯನ್ನು ತೋರಬೇಕು.

ಲ್ಯಾಪ್‌ಟಾಪ್‌ಗಳನ್ನ ಅವರೇ ಉಪಯೋಗಿಸಿಕೊಳ್ಳುವದು ಅಷ್ಟೇ ಮುಖ್ಯವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಜಿ.ಪಂ ಕಾರ್ಯನಿರ್ವಾಹಣಾಧಿಕಾರಿ ಭರತ್ ಎಸ್., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ, ತಹಸೀಲ್ದಾರ ವಾಸುದೇವ ಸ್ವಾಮಿ, ತಾ.ಪಂ ಇಓ ಕೃಷ್ಣಪ್ಪ ಧರ್ಮರ, ಕಾರ್ಮಿಕ ಇಲಾಖೆಯ ಉಮೇಶ ಹುಳ್ಳಣ್ಣವರ ಸೇರಿದಂತೆ ಅನೇಕರಿದ್ದರು. ಪಿಯುಸಿ, ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.೯೦ರಷ್ಟು ಅಂಕಗಳನ್ನು ಗಳಿಸಿದ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಲ್ಯಾಪ್‌ಟಾಪ್‌ಗಳನ್ನು ಉಚಿತವಾಗಿ ನೀಡಲಾಗುತ್ತಿದ್ದು, ಪಟ್ಟಣದಲ್ಲಿ ಒಟ್ಟು 20 ಮಕ್ಕಳು ಈ ಯೋಜನೆ ಲಾಭ ಪಡೆದರು.


Spread the love

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!