ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ: ತಾಲೂಕಿನ ಶಿರಗುಪ್ಪಿ ರೈತ ಸಂಪರ್ಕ ಕೇಂದ್ರದಲ್ಲಿ ಕಾರ್ಮಿಕ ಸಚಿವ ಸಂತೋಷ ಲಾಡ್ ಹಾಗೂ ಶಾಸಕ ಎನ್.ಎಚ್. ಕೋನರಡ್ಡಿ ಅವರು ಮುಂಗಾರು ಬಿತ್ತನೆ ಬೀಜಗಳ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಉತ್ತಮ ಗುಣಮಟ್ಟದ ಬಿತ್ತನೆ ಬೀಜಗಳನ್ನು ರೈತರಿಗೆ ಪೂರೈಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಅವರು ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಮಲ್ಲನಗೌಡ ಪಾಟೀಲ, ತಾಲೂಕಾ ಕೃಷಿಕ ಸಮಾಜದ ಅಧ್ಯಕ್ಷ ಗುರುನಾಥಗೌಡ ಮಾದಾಪುರ, ಕೃಷಿಕ ಸಮಾಜ ಜಿಲ್ಲಾ ಪ್ರತಿನಿಧಿ ಲಿಂಗಪ್ಪ ಬಾಡಿನ, ತಹಸೀಲ್ದಾರ ಜೆ.ಬಿ. ಮಜ್ಜಗಿ, ಸಹಾಯಕ ಕೃಷಿ ನಿರ್ದೇಶಕಿ ಮಂಜುಳಾ ತೆಂಬದ, ಕೃಷಿ ಅಧಿಕಾರಿ ಅಕ್ರಂ ಆಲದಕಟ್ಟಿ, ಎಸ್.ಬಿ. ಸೂಡಿ, ಶಿರಗುಪ್ಪಿ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು ಮತ್ತು ಶಿರಗುಪ್ಪಿ ಗ್ರಾಮದ ರೈತ ಮುಖಂಡರು ಉಪಸ್ಥಿತರಿದ್ದರು.



