ವಿಜಯಸಾಕ್ಷಿ ಸುದ್ದಿ, ಗದಗ : ಗದಗ-ಬೆಟಗೇರಿ ರೋಟರಿ ಕ್ಲಬ್ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಸದಾ ಕೈ ಜೋಡಿಸುತ್ತಿದ್ದು, ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ ಮುಂದಾಗುತ್ತಿರುವುದು ಹೆಮ್ಮಯ ಸಂಗತಿಯೆಂದು ಗದಗ ಶಹರ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎಸ್. ಬುರಡಿ ಹೇಳಿದರು.
ಅವರು ಬೆಟಗೇರಿ ಸರ್ಕಾರಿ ಶಾಲೆ ನಂ. 7ರಲ್ಲಿ ಗದಗ-ಬೆಟಗೇರಿ ರೋಟರಿ ಕ್ಲಬ್‌ನಿಂದ ಮಕ್ಕಳಿಗೆ ನೋಟ್‌ಬುಕ್ ಹಾಗೂ ಪೆನ್ ವಿತರಿಸಿ ಮಾತನಾಡಿದರು. ಮಕ್ಕಳು ಓದು-ಬರಹವನ್ನು ನಿಖರವಾಗಿ ರೂಢಿಸಿಕೊಳ್ಳಬೇಕು. ಸ್ಪಷ್ಟ ಓದು, ಶುದ್ಧ ಬರಹ, ಸ್ವರಭಾರಯುಕ್ತ ಓದು ಅತೀ ಮುಖ್ಯ ಎಂದರು.
ಗದಗ-ಬೆಟಗೇರಿ ರೋಟರಿ ಕ್ಲಬ್‌ನ್ ಅಧ್ಯಕ್ಷ ಡಾ.ರೇವಣಸಿದ್ದೇಶ್ವರ ಉಪ್ಪಿನ ಮಾತನಾಡಿ, ಸರ್ಕಾರಿ ಶಾಲೆಗಳ ಮಕ್ಕಳ ಶೈಕ್ಷಣಿಕ ಪ್ರಗತಿಗೆ ನಾವೆಲ್ಲರೂ ಕೈಜೋಡಿಸಬೇಕು. ಪ್ರತಿಭಾನ್ವಿತ ಮಕ್ಕಳಿಗೆ ಪ್ರೋತ್ಸಾಹ ಅಗತ್ಯ ಎಂದರು.
ಕ್ಲಬ್ ಕಾರ್ಯದರ್ಶಿ ಸಂತೋಷ ಅಕ್ಕಿ ಸ್ವಾಗತಿಸಿದರು. ಅಸಿಸ್ಟೆಂಟ್ ಗವರ್ನರ್ ಶಿವಾಚಾರ್ಯ ಹೊಸಳ್ಳಿಮಠ ಪ್ರಾಸ್ತಾವಿಕವಾಗಿ ಮಾತನಾಡಿದರು. ಅಕ್ಷಯ ಶೆಟ್ಟಿ ವಂದಿಸಿದರು.