HomeEducationವಿದ್ಯಾರ್ಥಿಗಳಿಗೆ ನೋಟ್‌ಬುಕ್ ವಿತರಣೆ

ವಿದ್ಯಾರ್ಥಿಗಳಿಗೆ ನೋಟ್‌ಬುಕ್ ವಿತರಣೆ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಸಮೀಪದ ಶಿಗ್ಲಿ ಜಿಎಂಪಿಎಸ್ ಶಾಲೆಗೆ EPSON ಸಂಸ್ಥೆಯ ವತಿಯಿಂದ ಸುಮಾರು 35 ಸಾವಿರ ರೂ ಮೌಲ್ಯದ ಸಾಮಗ್ರಿಗಳನ್ನು ವಿತರಿಸಲಾಯಿತು.

ಅತಿಥಿಗಳಾಗಿ ಆಗಮಿಸಿದ್ದ ತಾಲೂಕಿನ ದೈಹಿಕ ಶಿಕ್ಷಣಾಧಿಕಾರಿ ಎಂ.ಎಂ. ಹವಳದ ಮಾತನಾಡಿ, ಮಕ್ಕಳ ಕಲಿಕೆಗೆ ಪೂರಕವಾಗುವ ಉಚಿತ ನೋಟ್ ಪುಸ್ತಕಗಳನ್ನು EPSON ಸಂಸ್ಥೆಯಿಂದ ವಿತರಿಸಲಾಗುತ್ತಿದೆ. ಅತಿ ಸುಂದರವಾದ ಶಾಲಾ ಅವರಣದಲ್ಲಿ ನೂರಾರು ಗಿಡ-ಮರಗಳು ಹಸಿರಿನಿಂದ ಕಂಗೊಳಿಸುತ್ತಿವೆ. ಸ್ಮಾರ್ಟ್ ಕ್ಲಾಸ್, ಕಂಪ್ಯೂಟರ್, ಆಧುನಿಕ ತಂತ್ರಜ್ಞಾನ ಬಳಸಿ ಶಿಕ್ಷಣ ನೀಡುತ್ತಿರುವುದು ಹೆಚ್ಚು ಭರವಸೆಯನ್ನು ಮೂಡಿಸುತ್ತಿದೆ. ಇಂತಹ ಉತ್ತಮ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಉತ್ತಮ ಪ್ರಜೆಗಳಾಗುವಂತೆ ಕರೆ ನೀಡಿದ ಅವರು, ವಿದ್ಯಾರ್ಥಿಗಳಿಗೆ ಸಹಾಯ ಮಾಡುವ ಸಂಸ್ಥೆಗಳಿಗೆ ಇಲಾಖೆ ಪರವಾಗಿ ಧನ್ಯವಾದಗಳನ್ನು ಅರ್ಪಿಸುವದಾಗಿ ಹೇಳಿದರು.

ಕಾರ್ಯಕ್ರಮದಲ್ಲಿ ಇಸಿಓ ಹರೀಶ್, ಎಸ್.ಬಿ. ಅಣ್ಣಿಗೇರಿ, ಆರ್.ಡಿ. ಕಾಲಾಯಗರ, ಆರ್.ಎಫ್. ಕಪ್ಪಾತ್ತನವರ, ತಿಪ್ಪನಾಯಕ್, ದೀಪಾ ಬೆಸ್ಮ್, ಶಂಕರ ಕಲಾಲ್, ಚಂದ್ರಪ್ಪ ಮೇಗಲಮನಿ, ಮೇರಾಮೋಹಿದೀನ್ ಶಿಗ್ಗಾವ ಮುಂತಾದವರಿದ್ದರು.


Spread the love

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!