ವಿಜಯಸಾಕ್ಷಿ ಸುದ್ದಿ, ಗದಗ : 2024-25ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರಧಾನಮಂತ್ರಿ ಪೋಷನ್ ಶಕ್ತಿ ನಿರ್ಮಾಣ ಯೋಜನೆ ಹಾಗೂ ಅಜೀಂ ಪ್ರೇಮ್ ಜಿ ಪೌಂಡೇಶನ್‌ನಿಂದ ವಾರದಲ್ಲಿ ಹೆಚ್ಚುವರಿ 4 ದಿನಗಳ ಪೂರಕ ಪೌಷ್ಟಿಕ ಆಹಾರ ವಿತರಿಸುವ ಕಾರ್ಯಕ್ರಮದ ಅಂಗವಾಗಿ ನಗರದ ಎಸ್.ಎಂ. ಕೃಷ್ಣಾ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಪೂರಕ ಪೌಷ್ಠಿಕತೆ ವೃದ್ಧಿಸಲು ಮೊಟ್ಟೆ, ಬಾಳೆ ಹಣ್ಣು, ಶೇಂಗಾ ಚಿಕ್ಕಿಯನ್ನು ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ವಿತರಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ಖನಿಜ ಅಬಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ರೋಣ ಶಾಸಕ ಜಿ.ಎಸ್. ಪಾಟೀಲ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್ ಸಾಬ ಬಬರ್ಚಿ, ನಗರಸಭೆ ಸದಸ್ಯೆ ಲಕ್ಷ್ಮಿ ಸಿದ್ದಮ್ಮನಹಳ್ಳಿ, ಎಸ್‌ಡಿಎಂಸಿ ಅಧ್ಯಕ್ಷ ಬಸವರಾಜ ಕಡೇಮನಿ, ಕೆಡಿಪಿ ಸಮಿತಿಯ ಸದಸ್ಯ ಎಸ್.ಎನ್. ಬಳ್ಳಾರಿ, ಅಶೋಕ ಮಂದಾಲಿ, ಜಿ.ಪಂ ಸಿಇಒ ಭರತ್ ಎಸ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಿ.ಎಲ್. ಬಾರಾಟಕ್ಕೆ ,ಬಿಇಒ ಆರ್.ಎಸ್. ಬುರಡಿ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.