ವಿಜಯಸಾಕ್ಷಿ ಸುದ್ದಿ, ಹರಪನಹಳ್ಳಿ : ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ ಅವರು ಹರಪನಹಳ್ಳಿ ತಾಲೂಕಿನ ಸಾಸ್ವಿಹಳ್ಳಿ ಗ್ರಾಮದಲ್ಲಿ ಬಹುನಿವೇಶನ ವಸತಿ ವಿನ್ಯಾಸ ಅನುಮೋದನೆ ಪಡೆದ 159 ಫಲಾನುಭವಿಗಳಿಗೆ ಪಟ್ಟಾ ವಿತರಣಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪಟ್ಟಾ ವಿತರಿಸಿದರು.
Advertisement
ಈ ಸಂದರ್ಭದಲ್ಲಿ ತಾಲೂಕು ದಂಡಾಧಿಕಾರಿ ಗಿರೀಶ್ ಬಾಬು, ಪ್ರಕಾಶ್, ಗ್ರಾ.ಪಂ ಅಧ್ಯಕ್ಷೆ ಶಾಂತಲಾ ಕೊಟ್ರೇಶ್, ಉಪಾಧ್ಯಕ್ಷ ಬಸವರಾಜಪ್ಪ, ಪಿಡಿಓ ಚಂದ್ರಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಕುಬೇರಪ್ಪ, ಎಂ.ವಿ. ಅಂಜಿನಪ್ಪ, ಪುರಸಭೆ ಸದಸ್ಯರಾದ ರೆಹಮಾನ್ ಸಾಬ್ ದಾದಪೀರ್, ವೆಂಕಟೇಶ್ ವಕೀಲರು, ಆಪ್ತ ಸಹಾಯಕ ಮತ್ತೂರು ಬಸವರಾಜ್ ಸಾಸ್ವಿಹಳ್ಳಿ, ನಾಗರಾಜ್ ಸಾಸ್ವಿಹಳ್ಳಿ, ಗ್ರಾಮದ ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತು ಗ್ರಾಮ ಪಂಚಾಯತ್ ಸರ್ವ ಸದಸ್ಯರು ಹಾಜರಿದ್ದರು.