ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ: ತಾಲೂಕಿನ ಶಿರಗುಪ್ಪಿ ರೈತ ಸಂಪರ್ಕ ಕೇಂದ್ರದಲ್ಲಿ ಶಾಸಕ ಎನ್.ಎಚ್. ಕೋನರಡ್ಡಿ ಅವರು ಹಿಂಗಾರು ಬಿತ್ತನೆ ಬೀಜಗಳ ವಿತರಣೆಗೆ ಚಾಲನೆ ನೀಡಿದರು. ಉತ್ತಮ ಗುಣಮಟ್ಟದ ಬಿತ್ತನೆ ಬೀಜಗಳನ್ನು ಸಕಾಲದಲ್ಲಿ ಪೂರೈಸಲು ಹಾಗೂ ರೈತರಿಗೆ ತೊಂದರೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳಲು ಇಲಾಖೆ ಅಧಿಕಾರಿಗಳಿಗೆ ಅವರು ಕಟ್ಟುನಿಟ್ಟಾಗಿ ಸೂಚಿಸಿದರು.
Advertisement
ಈ ಸಂದರ್ಭದಲ್ಲಿ ಜಂಟಿ ಕೃಷಿ ನಿರ್ದೇಶಕ ಮಂಜುನಾಥ ಅಂತರವಳ್ಳಿ, ಹುಬ್ಬಳ್ಳಿ ಗ್ರಾಮೀಣ ತಹಸೀಲ್ದಾರ ಜೆ.ಬಿ. ಮಜ್ಜಗಿ, ಸಹಾಯಕ ಕೃಷಿ ಅಧಿಕಾರಿ ಮಂಜುಳಾ ತೆಂಬದ, ತಾಲೂಕಾ ಕೃಷಿಕ ಸಮಾಜದ ಅಧ್ಯಕ್ಷ ಗುರುನಾಥಗೌಡ ಮಾದಾಪುರ, ಕೃಷಿಕ ಸಮಾಜ ಜಿಲ್ಲಾ ಪ್ರತಿನಿಧಿ ಲಿಂಗಪ್ಪ ಬಾಡಿನ, ಶಿರಗುಪ್ಪಿ ಗ್ರಾ.ಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಶಿರಗುಪ್ಪಿ ಗ್ರಾಮದ ರೈತ ಮುಖಂಡರು, ಕೃಷಿ ಅಧಿಕಾರಿಗಳು ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.