ಕೋಲಾರ:- ನಗರದಲ್ಲಿ ವಾಹನ ದಟ್ಟಣೆ ಮತ್ತು ಮಾಲಿನ್ಯ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಎಂ.ಆರ್. ರವಿ ಹೊಸ ಆದೇಶ ಹೊರಡಿಸಿದ್ದಾರೆ.
ಬೆಳಗ್ಗೆ 6ರಿಂದ ರಾತ್ರಿ 10ರವರೆಗೆ ಭಾರಿ ವಾಹನಗಳಿಗೆ ನಗರ ಪ್ರವೇಶ ನಿಷೇಧಿಸಲಾಗಿದೆ. ಆದರೆ ಅಗತ್ಯ ಸೇವೆಗಾಗಿ ಹಣ್ಣು, ಹೂವು, ತಕರಾರಿ, ಗ್ಯಾಸ್ ಸಿಲಿಂಡರ್, ನೀರಿನ ಟ್ಯಾಂಕರ್ ಹೀಗೆ ಕೆಲವು ವಾಹನಗಳಿಗೆ ಮಾತ್ರ ಅನುಮತಿ ನೀಡಲಾಗಿದೆ. ಕಾರ್ಮಿಕರನ್ನು ಸಾಗಿಸುವ ವಾಹನಗಳು ರಸ್ತೆಯ ಬದಿಯಲ್ಲಿ ನಿಲ್ಲದಂತೆ ಸೂಚನೆ ನೀಡಲಾಗಿದೆ.
ಈ ನಿರ್ಬಂಧದಿಂದ ನಗರದ ಮುಖ್ಯ ರಸ್ತೆಗಳಲ್ಲಿ ಸಂಚಾರ ಸುಗಮವಾಗುವುದು, ವಾಹನ ದಟ್ಟಣೆ ಕಡಿಮೆಯಾಗುವುದು ಹಾಗೂ ಮಾಲಿನ್ಯ ನಿಯಂತ್ರಣಕ್ಕೆ ಸಹಾಯವಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.



